Wednesday, April 17, 2024

ಸೀಮೆ ಎಣ್ಣೆ ಸುರಿದು ಯುವಕನ ಕೊಲೆ ಪ್ರಕರಣ : ಪೊಲೀಸರಿಂದ ವಿವಿಧ ಆಯಾಮಗಳಿಂದ ವಿಚಾರಣೆ

ಬಂಟ್ವಾಳ: ಸೀಮೆ ಎಣ್ಣೆ ಸುರಿದು ಯುವಕನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ವಿವಿಧ ಆಯಾಮಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

ಸುರಿಬೈಲು ನಿವಾಸಿ ಸಮಾದ್ ಎಂಬಾತನ ಕೊಲೆ ಪ್ರಕರಣದ ಆರೋಪಿ ಸಾಲೆತ್ತೂರು ಕಟ್ಟೆಪುನಿ ನಿವಾಸಿ ಅದ್ರಾಮ ಯಾನೆ ಅಬುಬಕ್ಕರ್ ನ್ನು ಬಂಧಿಸಿದ ಪೋಲೀಸರು ಹೆಚ್ಚಿನ ತನಿಖೆಯ ದೃಷ್ಟಿಯಿಂದ ಪೋಲಿಸ್ ಕಸ್ಟಡಿಗೆ ಪಡೆದುಕೊಂಡಿದ್ದರು.

ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ಸುಳಿವು ಪಡೆಯುವ ದೃಷ್ಟಿಯಿಂದ ಸ್ವತಃ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರು ತನಿಖೆ ಪ್ರಾರಂಭಿಸಿದ್ದಾರೆ.

ಕೊಲೆಗೆ ಸ್ಪಷ್ಟವಾದ ಕಾರಣ ಏನು…? ಎಲ್ಲಿ ಕೊಲೆ ನಡೆಸಿದ್ದಾನೆ….?, ಹೇಗೆ ನಡೆಸಿದ್ದಾನೆ….?, ಒಬ್ಬನೇ ನಡೆಸಿದ್ದಾನಾ…? ಅಥವಾ ಜೊತೆ ಸೇರಿಕೊಂಡಿದ್ದಾರಾ….? ಕೊಲೆಗೆ ಬಳಸಿದ ವಸ್ತುಗಳು ಯಾವುದು ಹೀಗೆ ಅನೇಕ ವಿಚಾರಗಳ ತನಿಖೆ ನಡೆಯಬಹುದು.

ಪೋಲೀಸರ ಪ್ರಾಥಮಿಕ ತನಿಖೆಯಂತೆ ಆತ ಕೊಲೆ ಮಾಡಲು ಸಮಾದ್ ನನ್ನು ಇರಾ ಪದವಿಗೆ ಸೇರಿದರು ಕರೆದುಕೊಂಡು ಹೋಗಿದ್ದ ರಿಕ್ಷಾ ಹಾಗೂ ಕೊಲೆಗೆ ಬಳಸಿದ್ದ ಎನ್ನಲಾಗಿದ್ಧ ಸೀಮೆ ಎಣ್ಣೆ ಕ್ಯಾನ್ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...