Friday, April 12, 2024

ನ.7ರಂದು ಸಿಎಂ ಬೊಮ್ಮಾಯಿ ಕರಾವಳಿ ಪ್ರವಾಸ

ಉಡುಪಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ನವೆಂಬರ್ 7ರಂದು ಕರಾವಳಿ ಪ್ರವಾಸ ಕೈಗೊಳ್ಳಲಿದ್ದು, ಉಡುಪಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ನ.7ರಂದು ಬೆಳಗ್ಗೆ 10:30ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದು, ಬಳಿಕ ರಸ್ತೆ ಮೂಲಕ ನೇರವಾಗಿ ಕಾಪುವಿಗೆ ತೆರಳಿ 11 ಗಂಟೆಗೆ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಪರಾಹ್ನ 1:50ಕ್ಕೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ನಡೆಯುವ ಕರಾವಳಿಯ ಹಿರಿಯ ಪತ್ರಕರ್ತರ ಜನ್ಮಶತಮಾನೋತ್ಸವ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಅಪರಾಹ್ನ 3:45ಕ್ಕೆ ಕುಂದಾಪುರ ತಾಲೂಕು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ತಿಳಿದುಬಂದಿದೆ

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...