Saturday, April 13, 2024

ಅನಂತಾಡಿಯ ಯುವಕನ ಚಿಕಿತ್ಸೆಗೆ MNG ಪೌಂಡೇಶನ್ ನೇತೃತ್ವದಲ್ಲಿ ಆರ್ಥಿಕ ಸಹಾಯ ಹಸ್ತಾಂತರ

ಅನಂತಾಡಿ ಗ್ರಾಮದ ಹೇಮಂತ್ ಎಂಬ ಯುವಕನ ಚಿಕಿತ್ಸೆಗೆ ಸಂಪೂರ್ಣ ಹಣದ ವ್ಯವಸ್ಥೆಯನ್ನು ಸಮಾಜದ ದಾನಿಗಳ ಮುಖಾಂತರ MNG ಪೌಂಡೇಶನ್ ನೇತೃತ್ವದಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅನಂತಾಡಿ ವತಿಯಿಂದ MNG ಪೌಂಡೇಶನ್ ಜೊತೆಗೆ ಕೈ ಜೋಡಿಸಿ ಆರ್ಥಿಕ ಸಹಾಯ ಮಾಡಿರುತ್ತಾರೆ. ಇದನ್ನು ಇಂದು ಹೇಮಂತ್ ನ ನಿವಾಸಕ್ಕೆ ಬೇಟಿ ನೀಡಿದ ಮಾಜಿ ಸಚಿವರಾದ ಬಿ.ರಮಾನಾಥ ರೈ ರವರು ಆರೋಗ್ಯ ವಿಚಾರಿಸಿ, ವಲಯ ಕಾಂಗ್ರೆಸ್ ಅನಂತಾಡಿ ವತಿಯಿಂದ ನೀಡಿದ ಧನಸಹಾಯ ವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ನಾರಾಯಣ ಸಾಲ್ಯಾನ್,ವಲಯ ಕಾಂಗ್ರೆಸ್ ಅದ್ಯಕ್ಷರಾದ ಸತೀಶ್ ಬಾಕಿಲ,ನಾರಾಯಣ ಅನಂತಾಡಿ, ಸುಂದರ ಬಾಕಿಲ, ಚಂದ್ರಹಾಸ ಹಾಗೂ MNG ಪೌಂಡೇಶನ್ ನ ಬಶೀರ್ ಪರ್ಲಡ್ಕ ಹಾಗೂ ಸದಸ್ಯರು ಉಪಸ್ಥರಿದ್ದರು.

More from the blog

ಮನೆ ಮನೆಗೆ ತೆರಲಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...

ಜಮೀನಿನ ವಿಚಾರದಲ್ಲಿ ತಕರಾರು ನಡೆಸಿ ಹಲ್ಲೆ ಪ್ರಕರಣ : ಶಿಕ್ಷೆ ಪ್ರಕಟ

ಬಂಟ್ವಾಳ: ಜಮೀನಿನ ವಿಚಾರದಲ್ಲಿ ತಕರಾರು ಉಂಟಾಗಿ ಹಲ್ಲೆ ನಡೆಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಶಿಕ್ಷೆ ಪ್ರಕಟಗೊಳಿಸಿದ ಬಗ್ಗೆ ವರದಿಯಾಗಿದೆ. ದೇವಸ್ಯ ಪಡೂರು ಗ್ರಾಮ,ಕುಟ್ಟಿಕಳ ,ಅಲ್ಲಿಪಾದೆ ಎಂಬಲ್ಲಿ ನೀಲಯ್ಯ ಮೂಲ್ಯ ಹಾಗೂ ಶ್ರೀನಿವಾಸ್ ಪೂಜಾರಿ ರವರಿಗೆ...

ಲೋಕಸಭಾ ಚುನಾವಣೆ : ಮತಯಂತ್ರಗಳ ಕಮಿಷನಿಂಗ್‌ ಕಾರ್ಯ…. ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ :ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು. ಈ ಸಂದರ್ಭದಲ್ಲಿ...

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...