Saturday, April 13, 2024

ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳಿಗೆ FSSAI &MSME ಲೈಸೆನ್ಸ್ ನೋಂದಣಿ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕ್ ಪಂಚಾಯತ್ ಬಂಟ್ವಾಳ, ಸಂಜೀವಿನಿ ಕರ್ನಾಟಕ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ UNDP ಪ್ರಾಜೆಕ್ಟ್ ಕೋಡ್ ಉನ್ನತಿ ಸಹಭಾಗಿತ್ವದಲ್ಲಿ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳಿಗೆ FSSAI &MSME ಲೈಸೆನ್ಸ್ ನೋಂದಣಿ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಸಾಮರ್ಥ್ಯ ಸೌಧ ಸಭಾಂಗಣ ದಲ್ಲಿ ನಡೆಯಿತು.

ತಾಲೂಕಿನ ಕಾರ್ಯ ನಿರ್ವಹಣಾ ಅಧಿಕಾರಿ ರಾಜಣ್ಣರವರು ಕಾರ್ಯಕ್ರಮ ಉದ್ಘಾಟಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಸ್ವ ಸಹಾಯದ ಮಹಿಳೆಯರು FSSAI, MSME ನೋಂದಾವಣೆ ಮಾಡಿ ಅದರ ಪ್ರಯೋಜನವನ್ನು ಪಡೆದು ಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿ ಎಂದು ಶುಭಹಾರೈಸಿದರು.

ಜಿಲ್ಲಾ ಪಂಚಾಯತ್ ಕಾರ್ಯಕ್ರಮ ವ್ಯವಸ್ಥಾಪಕರಾದ ಹರಿಪ್ರಸಾದ್ ರವರು ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ವಿವಿಧ ವೃತ್ತಿ ಚಟುವಟಿಕೆ ಯಿಂದ ಆದಾಯ ಗಳಿಸಿ ಉನ್ನತ ಮಟ್ಟದ ಜೀವನವನ್ನು ಮಾಡಲು ಸಾಧ್ಯ ಎಂದು ಸವಿವಾರವಾಗಿ ಮನವರಿಕೆ ಮಾಡಿದರು. ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಆದ ಸುಧಾರವರು ಕಾರ್ಯಕ್ರಮ ದಲ್ಲಿ ಭಾಗಿಯಾದರು.

ವಲಯ ಮೇಲ್ವಿಚಾರಕರು ಆದ ಕುಷಳಪ್ಪ ಕಾರ್ಯಕ್ರಮದಲ್ಲಿ ಭಾಗಿಯಾದರು. ವಲಯ ಮೇಲ್ವಿಚಾರಕರು ಆದ ನಳಿನಿಯವರು ಕಾರ್ಯಕ್ರಮ ನಿರೂಪಣೆ ಮಾಡಿದರು.

ತಾಲೂಕಿನ ಸಹಾಯಕ ನಿರ್ದೇಶಕರು ಧಿನೇಶ್, UNDP -ಯ ಉದ್ಯಮ ಶೀಲ ಅಭಿವೃದ್ಧಿಅಧಿಕಾರಿ ಉಮೇಶ್, ಜಿಲ್ಲಾ ಅಭಿಯಾನ ಘಟಕದ ವಿನೀತ್, ಜಿಲ್ಲಾ ಸಾಯೋಜಕ ಶಿವಕುಮಾರ್, ಸಮುದಾಯ ಸಂಚಾಲಕಿಯ ದೀಕ್ಷಾ, ಲಿಡಿಯ ಹಾಜರಿದ್ದರು.

Mbk,lcrp ಹಾಗೂ ಫಲನುಭವಿಗಳು ಕಾರ್ಯಕ್ರಮ ದಲ್ಲಿ ಭಾಗಿಯಾದರು. ಒಟ್ಟು 30 ಜನರು FSSAI ಸರ್ಟಿಫಿಕೇಟ್ ಮಾಡಿಸಿಕೊಂಡರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...