Wednesday, April 10, 2024

ಅಕ್ಷರ ಸಂತನಿಗೆ ಸಂದ ಗ್ರಾಮದ ಗೌರವ : ಗ್ರಾ.ಪಂ ಕಟ್ಟಡದ ಗೋಡೆಯಲ್ಲಿ ಮೂಡಿಬಂದ ಹಾಜಬ್ಬ ಚಿತ್ರ

ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ.

ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ ಉದ್ಘಾಟನೆ ಹಂತಕ್ಕೆ ತಲುಪಿದೆ. ಕಟ್ಟಡದ ಒಂದು ಅಂತಸ್ತಿನ ಗೋಡೆ ಪೂರ್ತಿ ಹರೇಕಳ ಹಾಜಬ್ಬ ಅವರ ಚಿತ್ರವನ್ನು ರಚಿಸಲಾಗಿದೆ.

ಹರೇಕಳ ಗ್ರಾಮದ ಹೆಸರನ್ನು ಇಡೀ ಜಗತ್ತಿಗೆ ಪಸರಿಸಿದವರು. ಕಿತ್ತಳೆ ಹಣ್ಣು ಮಾರಿ ತನ್ನೂರಿನಲ್ಲಿ ಶಾಲೆ ಕಟ್ಟಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ ಶ್ರೇಷ್ಟರು. ಗ್ರಾಮಕ್ಕೆ ವಿಶೇಷ ಗೌರವ ಅವರಿಂದಲೇ ಬಂದಿದೆ. ದೇಶದ ಅತ್ಯುನ್ನತ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದವರು. ಗ್ರಾಮದಿಂದ ಎಂತಹ ಗೌರವ ಕೊಟ್ಟರೂ ಸಾಲದು. ಆದ್ದರಿಂದ ಗ್ರಾಮದ ಸರ್ವ ಸದಸ್ಯರ ನಿರ್ಣಯದಂತೆ ಕಟ್ಟಡದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಅವರ ಚಿತ್ರ ರಚಿಸಲಾಗಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಬದ್ರುದ್ದೀನ್ ತಿಳಿಸಿದರು.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...