Sunday, April 7, 2024

ಚಿನ್ನ, ಬೆಳ್ಳಿ ದರ ಮತ್ತೆ ಏರಿಕೆ : ಇಲ್ಲಿದೆ ವಿವರ

ನಿನ್ನೆಗೆ ಹೋಲಿಸಿದರೆ ಇಂದು ಚಿನ್ನ ಬೆಲೆ ದುಬಾರಿಯಾಗಿದೆ. ನಿನ್ನೆ ಒಂದು ಗ್ರಾಂಗೆ 4,680 ರೂ. ಆಗಿದ್ದ ಚಿನ್ನದ ಬೆಲೆ ಇಂದು ಮಾರುಕಟ್ಟೆಯಲ್ಲಿ 4,736 ರೂ. ಆಗಿದೆ. ಕಳೆದ ಎರಡು ವಾರಗಳಿಂದ ಚಿನ್ನದ ಬೆಲೆಯಲ್ಲಿ ಸತತವಾಗಿ ಏರಿಕೆಯಾಗುತ್ತಲೇ ಇದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಬಗ್ಗೆ ನೋಡುವುದಾದರೆ ಒಂದು ಗ್ರಾಂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,736 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,167 ಆಗಿದೆ. ಇತ್ತ ಎಂಟು ಗ್ರಾಂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 37,888 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 41,336 ಆಗಿದೆ.

ಅತ್ತ ಹತ್ತು ಗ್ರಾಂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 47,360 ಆಗಿದ್ದು, 24 ಕ್ಯಾರೆಟ್  ಬಂಗಾರದ ಬೆಲೆ (ಅಪರಂಜಿ) – ರೂ. 51,670 ಆಗಿದೆ. ಅಲ್ಲದೇ ನೂರು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 4,73,600 ಆಗಿದ್ದು, 24 ಕ್ಯಾರೆಟ್  ಬಂಗಾರದ ಬೆಲೆ (ಅಪರಂಜಿ) – ರೂ. 5,16,700 ಆಗಿದೆ.
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,410 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,150, ರೂ. 47,360, ರೂ. 47,360 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,460 ರೂ. ಆಗಿದೆ.

ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm ಬೆಳ್ಳಿ ದರಗಳು ಇಂದು ಕ್ರಮವಾಗಿ ರೂ. 674, ರೂ. 6,740 ಹಾಗೂ ರೂ. 67,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 67,400 ಆಗಿದ್ದರೆ ದೆಹಲಿಯಲ್ಲಿ ರೂ. 61,700 ಮುಂಬೈನಲ್ಲಿ ರೂ. 61,700 ಹಾಗೂ ಕೊಲ್ಕತ್ತದಲ್ಲೂ ರೂ. 61,700 ಗಳಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...