Tuesday, April 9, 2024

ಆಭರಣ ಪ್ರಿಯರಿಗೆ ಬಿಗ್‌ ಶಾಕ್ : ದುಬಾರಿಯಾದ ಚಿನ್ನ-ಬೆಳ್ಳಿ

ಕಳೆದ ಕೆಲ ದಿನಗಳಿಂದ ಏರಿಳಿತ ಕಾಣುತ್ತಿದ್ದ ಚಿನ್ನ ನಿನ್ನೆಗಿಂತ ಇಂದು ಸ್ವಲ್ಪ ಜಿಗಿತ ಕಂಡಿದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ ನೋಡುವುದಾದರೆ ಒಂದು ಗ್ರಾಂ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 4,700 ರೂಪಾಯಿ ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,128 ಆಗಿದೆ. ಅದೇ ರೀತಿ ಎಂಟು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 37,600 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 41,024 ಆಗಿದೆ.

ಇತ್ತ ಹತ್ತು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 47,000 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 51,280 ಆಗಿದೆ. ನೂರು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ – ರೂ. 4,70,000 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ 5,12,800 ಆಗಿದೆ.

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,050 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,700 ರೂ. 47,000, ರೂ. 47,000 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,150 ರೂ. ಆಗಿದೆ.

ಮಾರುಕಟ್ಟೆಯಲ್ಲಿ ಬೆಳ್ಳಿ ದರ ಕಳೆದ ವಾರ ಸಾಕಷ್ಟು ಇಳಿಕೆಯಾಗಿತ್ತು. ಆದರೆ ಮತ್ತೆ ಬೆಳ್ಳಿ ದರ ನಿನ್ನೆಯಿಂದ ಗಗನಕ್ಕೇರುತ್ತಿದೆ. ನಿನ್ನೆ ಪ್ರತಿ ಕೆಜಿಗೆ ರೂ 60,000 ರೂ ಇದ್ದ ಬೆಳ್ಳಿ ಇಂದು 60,500 ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ದರ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 605, ರೂ. 6,050 ಹಾಗೂ ರೂ 60,500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,300 ಆಗಿದ್ದರೆ ದೆಹಲಿಯಲ್ಲಿ ರೂ. 66,300 ಮುಂಬೈನಲ್ಲಿ ರೂ. 60,500 ಹಾಗೂ ಕೊಲ್ಕತ್ತದಲ್ಲೂ ರೂ. 60,500 ಗಳಾಗಿದೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...