Saturday, April 6, 2024

ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಹಾಗೂ ಪ್ರಾಂಶುಪಾಲರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಸಮೃದ್ಧ, ಸದೃಢ ಸ್ವಾಭಿಮಾನಿ ಕರ್ನಾಟಕ – ಎಸ್ ಡಿ ಪಿ ಐ ಸಂಕಲ್ಪ ಎಂಬ ಘೋಷಣೆಯೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ಕೈಕಂಬದಲ್ಲಿರುವ ಕ್ಷೇತ್ರ ಕಛೇರಿ ಮುಂಭಾಗ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್.ಡಿ.ಪಿ.ಐ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ನೆರವೇರಿಸಿ ಕರ್ನಾಟಕದ ಇತಿಹಾಸದ ಗತ ವೈಭವವನ್ನು ವಿವರಿಸಿ, ಕರ್ನಾಟಕದ ನಾಡು ನುಡಿ ಸಂಸ್ಕೃತಿಯನ್ನು ಕಟ್ಟಿ ಬೆಳೆಸಲು ನಾವೆಲ್ಲರೂ ಕಟ್ಟಿಬದ್ಧರಾಗಬೇಕು ಎಂಬ ಸಂದೇಶವನ್ನು ನೀಡಿ ಶುಭವನ್ನು ಹಾರೈಸಿದರು. ಧ್ವಜಾರೋಹಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮೂನಿಶ್ ಅಲಿ ವಹಿಸಿದ್ದರು.

ಈ ಸಂದರ್ಭದಲ್ಲಿ ಪಕ್ಷದ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ, ಬಂಟ್ವಾಳ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ, ಜೊತೆ ಕಾರ್ಯದರ್ಶಿ ಮುಬಾರಕ್ ಗೂಡಿನಬಳಿ, ಕ್ಷೇತ್ರ ಸಮಿತಿ ಸದಸ್ಯರಾದ ಶಾಹುಲ್ ಹಮೀದ್ ಎಸ್ ಎಚ್, ಮುಸ್ತಾಕ್ ತಲಪಾಡಿ, ಸಂಗಬೆಟ್ಟು ಬ್ಲಾಕ್ ಅಧ್ಯಕ್ಷರಾದ ಇರ್ಫಾನ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು.

ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ ಕಾರ್ಯಕ್ರಮ: 

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಎಸ್ ಡಿ ಪಿ ಐ ಬಂಟ್ವಾಳ ವತಿಯಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆಎನ್ ಗಂಗಾಧರ ಆಳ್ವ ಇವರ ಸಾಧನೆಯನ್ನು ಗುರುತಿಸಿ, ತುಂಬೆ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಸನ್ಮಾನಿಸಿದರು. ಗ್ರಾಮೀಣ ಮಟ್ಟದಲ್ಲಿರುವ ತುಂಬೆ ಪದವಿ ಪೂರ್ವ ಕಾಲೇಜು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದು, ಇಲ್ಲಿನ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸವನ್ನು ಪಡೆದು ದೇಶ ವಿದೇಶಗಳಲ್ಲಿ ಉದ್ಯೋಗವನ್ನು ಪಡೆದಿದ್ದು ಉತ್ತಮವಾದ ಜೀವನವನ್ನು ಸಾಗಿಸುತ್ತಿದ್ದಾರೆ ಇದೆಲ್ಲದರ ಕೀರ್ತಿಯು ನೇರ ನಡೆ ನುಡಿಯ ಪ್ರಾಂಶುಪಾಲರಾದ ಕೆಎನ್ ಗಂಗಾಧರ ಆಳ್ವ ರವರಿಗೆ ಸಲ್ಲುತ್ತದೆ ಎಂಬ ಪ್ರಶಂಸನೀಯ ಮಾತುಗಳನ್ನಾಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮೂನಿಶ್ ಅಲಿ, ತುಂಬೆ ಪದವಿ ಪೂರ್ವ ಕಾಲೇಜಿನ ಶಿಕ್ಷಕರಾದ ಶ್ರೀನಿವಾಸ್ ಕೆದಿಲ, ಶಿಕ್ಷಕಿಯಾದ ವಿದ್ಯಾ ಮೇಡಂ, ಸಂಸ್ಥೆಯ ವ್ಯವಸ್ಥಾಪಕರಾದ ಕಬೀರ್ ತುಂಬೆ, ಎಸ್ ಡಿ ಪಿ ಐ ಜಿಲ್ಲಾ ಸಮಿತಿ ಸದಸ್ಯರಾದ ಯೂಸಫ್ ಆಲಡ್ಕ, ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ, ಜೊತೆ ಕಾರ್ಯದರ್ಶಿಗಳಾದ ಮುಬಾರಕ್ ಗೂಡಿನಬಳಿ, ಅಶ್ರಫ್ ತಲಪಾಡಿ, ಕ್ಷೇತ್ರ ಸಮಿತಿ ಸದಸ್ಯರಾದ ಮುಸ್ತಾಕ್ ತಲಪಾಡಿ, ಸಂಗಬೆಟ್ಟು ಬ್ಲಾಕ್ ಅಧ್ಯಕ್ಷರಾದ ಇರ್ಫಾನ್ ತುಂಬೆ ಮತ್ತಿತರರು ಉಪಸ್ಥಿತರಿದ್ದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...