Saturday, April 13, 2024

ಶಾಲಾ ಬಸ್-ಕಾರು ಡಿಕ್ಕಿ : ಕಾರು ಚಾಲಕ ಗಂಭೀರ

ಮೂಡುಬಿದಿರೆ: ಶಾಲಾ ವಾಹನಕ್ಕೆ ಕಾರೊಂದು ಅಲಂಗಾರು ಬಳಿ ಢಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನ ಚಾಲಕ ಗಂಭೀರ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಡುಬಿದಿರೆ- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಆಲಂಗಾರಿನಲ್ಲಿ ಸಾಯಂಕಾಲ 4 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದೆ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಮೂಡುಬಿದಿರೆ ಆಲಂಗಾರಿನ ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕಾರು ಆಲಂಗಾರು ಬಳಿ ಬ್ರೇಕ್ ಹಾಕಿದ್ದು, ಆಗ ತಕ್ಷಣ ಕಾರು ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ. ಆಗ ಶಾಲಾ ವಾಹನದ ಚಾಲಕ ಎಡ ಕಡೆಗೆ ವಾಹನವನ್ನು ತಿರುಗಿಸಿದ್ದು, ಆಗ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ನಿಂತಾಗ ಕಾರು ಅಲ್ಲಿಗೆ ಬಂದು ಗುದ್ದಿದೆ. ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...