Sunday, April 7, 2024

ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ವರ್ಗಾವಣೆ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೊಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ.

ರಾಜ್ಯದಲ್ಲಿ ಇವರ ಜೊತೆ ಅನೇಕ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ನಡೆದಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊದದಂತೆ ಶಾಂತಿ ನೆಲೆಸುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದವರಲ್ಲಿ ಇವರು ಓರ್ವ ಅಧಿಕಾರಿ.

ವಿಟ್ಲದಲ್ಲಿ ಎರಡು ಸಮುದಾಯಗಳ ಮಧ್ಯೆ ನಡೆದ ಗಲಾಟೆಯ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣ ಕ್ಕೆ ತಂದ ಕೀರ್ತಿ ಹಾಗೂ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯ ಕರ್ತರಿಗೆ ಮಾತಿನ ಮೂಲಕ ಎಚ್ಚರಿಕೆ ನೀಡಿದ ವಿಡಿಯೋ ಒಂದು ಸಖತ್ ವೈರಲ್ ಅಗತ್ತು.

‌‌ ಹಿಂದೂ ಸಂಘಟನೆ ಯ ಪ್ರಮುಖ ಸುರೇಂದ್ರ ಬಂಟ್ವಾಳ ಅವರ ಕೊಲೆ ಪ್ರಕರಣದ ನೈಜ ಆರೋಪಿಗಳ ಬಂಧನ ಸಹಿತ, ಅನೇಕ ಕ್ಲಿಷ್ಟಕರವಾದ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ ಅನುಭವಿ ಪೋಲೀಸ್ ಅಧಿಕಾರಿ.

ಇತ್ತೀಚಿಗೆ ಉಪ್ಪಿನಂಗಡಿಯಲ್ಲಿ ನಡೆದ ಗಲಭೆ ನಿಯಂತ್ರಣ ದಲ್ಲೂ ಇವರ ಪಾತ್ರ ಪ್ರಮುಖವಾಗಿತ್ತು.  ಅ ಬಳಿಕ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಂಧನದಲ್ಲಿ ಇವರ ಪಾತ್ರ ಹೆಚ್ಚಿತ್ತು.

ಈ ರೀತಿಯಲ್ಲಿ ಜಿಲ್ಲೆ ಅಲ್ಲದೆ ಹೊರಜಿಲ್ಲೆಯಲ್ಲೂ ಕೆಲಸ ಮಾಡಿ ಹೆಸರುಗಳಿಸಿದ ಓರ್ವ ಖಡಕ್ ಪೊಲೀಸ್ ಅಧಿಕಾರಿಯಾಗಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...