Saturday, April 6, 2024

ನಾಡಪ್ರಭು ಕೆಂಪೇಗೌಡರ ರಥಕ್ಕೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸ್ವಾಗತ

ಬಂಟ್ವಾಳ: ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹಿಸಲು ಬಂಟ್ವಾಳ ತಾಲೂಕಿಗೆ ಆಗಮಿಸಿರುವ ಕೆಂಪೇಗೌಡ ರಥವನ್ನು ತಾಲೂಕು ಆಡಳಿತದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಕೊಡಾಜೆಯಲ್ಲಿ ಸ್ವಾಗತಿಸಲಾಯಿತು.

ಮಂಗಳಪದವಿನಿಂದ ಬಂದ ಕೆಂಪೇಗೌಡ ರಥವನ್ನು ಗೋಳಿಕಟ್ಟೆ ಅಂಗನವಾಡಿ ಕೇಂದ್ರದ ಸ್ತ್ರೀಶಕ್ತಿ ಸದಸ್ಯರು ಪೂರ್ಣಕುಂಭ ಕಲಶದೊಂದಿಗೆ ಸ್ವಾಗತಿಸಿದರು.

ಇದೇ ವೇಳೆ ಪ್ರತಿಮೆ ಆವರಣದ ಉದ್ದೇಶ ಹಾಗೂ ರೂಪುರೇಷೆಗಳನ್ನೊಳಗೊಂಡ ವಿಡಿಯೋವನ್ನು ಎಲ್‌ಇಡಿ ಸ್ಕ್ರೀನ್ ಮೂಲಕ ಪ್ರದರ್ಶಿಸಲಾಯಿತು.

ತಹಶೀಲ್ದಾರ್ ಡಾ.ಸ್ಮಿತಾ ರಾಮು, ತಾ.ಪಂ ಇಒ ರಾಜಣ್ಣ, ಆರೋಗ್ಯಾಧಿಕಾರಿ ಅಶೋಕ್ ಕುಮಾರ್, ಬಿಇಓ ಜ್ಞಾನೇಶ್, ಸಮಾಜ ಕಲ್ಯಾಣಾಧಿಕಾರಿ ಸುನಿತಾ ಕುಮಾರಿ, ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಅನಂತಾಡಿ ಗ್ರಾ.ಪಂ.ಅಧ್ಯಕ್ಷರಾದ ಗಣೇಶ್ ಪೂಜಾರಿ, ನೆಟ್ಲ ಮುಡ್ನೂರು ಗ್ರಾ.ಪಂ‌.ಅಧ್ಯಕ್ಷ ಸತೀಶ್, ವೀರಕಂಬ ಗ್ರಾ‌ಪಂ‌ ಅಧ್ಯಕ್ಷ ದಿನೇಶ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಡೊಂಬಯ್ಯ ಅರಳ, ಬೂಡಾ ದೇವದಾಸ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಸಂತೋಷ್ ರೈ, ಪ್ರಮುಖರಾದ ತನಿಯಪ್ಪ ಗೌಡ, ಸನತ್ ಕುಮಾರ್ ರೈ, ಸುಲೋಚನಾ ಜಿಕೆ ಭಟ್, ಪುಷ್ಪರಾಜ ಚೌಟ,ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಲಾವಣ್ಯ, ಡಾ.ಮನೋಹರ ರೈ, ವಿವಿಧ ಗ್ರಾ.ಪಂ.ಸದಸ್ಯರು, ಬಿಜೆಪಿ ಮುಖಂಡರು ಕಂದಾಯ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಇದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...