Thursday, April 11, 2024

ಕ್ಷಯ ರೋಗಿಗಳಿಗೆ ಅಹಾರ ದವಸಧಾನ್ಯ ವಿತರಣೆ-ಪ್ರಕಾಶ್ ಕಾರಂತ್

ಬಂಟ್ವಾಳ: ಮಾನವೀಯತೆಗಿಂತ ಮಿಗಿಲಾದ ಯಾವುದೇ ಜಾತಿ, ಧರ್ಮವಿಲ್ಲ. ಕಷ್ಟ ಬಂದಾಗ ಮಾನವೀಯತೆಯ ಮೇಲೆ ಪ್ರೀತಿ ಇದ್ದವರು ಸ್ಪಂದಿಸುತ್ತಾರೆ. ಅಂತಹ ಮಾನವೀಯ ಸ್ಪಂದನೆ ಫರಂಗಿಪೇಟೆಯ ಸೇವಾಂಜಲಿಯಲ್ಲಿ ಇದೆ. ಕೃಷ್ಣ ಕುಮಾರ್ ಪೂಂಜರ ಜೊತೆ ಅವರ ತಂಡ ಮನುಷತ್ವಕ್ಕಾಗಿ ನಿಸ್ವಾರ್ಥದಿಂದ ಸೇವೆ ಸ್ಲಲಿಸುತ್ತಿದ್ದಾರೆ ಎಂದು ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಹೇಳಿದರು.

ಅವರು ಶನಿವಾರ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಹಾಗೂ ರೋಟರಿ ಕ್ಲಬ್ ಫರಂಗಿಪೇಟೆ ಆಶ್ರಯದಲ್ಲಿ ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಸೇವಾಂಜಲಿ ಸಂಸ್ಥೆ ದಾನಿಗಳ ಸಹಕಾರದೊಂದಿಗೆ ದತ್ತು ಸ್ವೀಕರಿಸಿದ ಕ್ಷಯ ರೋಗಿಗಳಿಗೆ ಸೇವಾಂಜಲಿ ಸಭಾಂಗಣದಲ್ಲಿ ಆಹಾರ ದವಸಧಾನ್ಯ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಜಯರಾಮ ಶೇಖ ಮಾತನಾಡಿ ಕ್ಷಯ ರೋಗಿಗಳು ರೋಗದ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ರೋಗದ ವಿರುದ್ದ ಧೈರ್ಯವಾಗಿ ಹೋರಾಡಿದಾಗ ರೋಗ ನಿರ್ಮೂಲನೆಗೊಳಿಸಲು ಸಾಧ್ಯವಿದೆ. ಅಂತಹ ಧೈರ್ಯ ತುಂಬುವ ಕಾರ್ಯವನ್ನು ಸೇವಾಂಜಲಿ ಸಂಸ್ಥೆ ಮಾಡುತ್ತಿದೆ ಎಂದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತವಿಕವಾಗಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಕರೆಯನ್ವಯ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಮೊದಲ ಹಂತದಲ್ಲಿ 15 ಮಂದಿ ಕ್ಷಯ ರೋಗಿಗಳಿಗೆ ಧವಸ ಧಾನ್ಯ ಮತ್ತಿತರ ಆಹಾರದ ಕಿಟ್ ವಿತರಿಸಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಸುಮಾರು 1200 ರೂ ಮೊತ್ತದ ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳದ ಸದಸ್ಯೆ ವಾಣಿ ಕಾರಂತ್ ಸೇವಾಂಜಲಿ ಟ್ರಸ್ಟಿ ತಾರನಾಥ ಕೊಟ್ಟಾರಿತೇವು, ರಘುನಾಥ ಪೂಜಾರಿ ತುಪ್ಪೆಕಲ್ಲು, ಮನೋಹರ್ ನಾಯ್ಕ್ ಯಶಸ್ವಿ, ಉದ್ಯಮಿ ಉಮೇಶ್ ಸಾಲ್ಯಾನ್ ಬೆಂಜನಪದವು, ಪುದು ಪಂಚಾಯತಿ ಸದಸ್ಯ ಹಾಶೀರ್ ಪೇರಿಮಾರ್, ಮೇರಮಜಲು ಗ್ರಾ.ಪಂ ಮಾಜಿ ಅಧ್ಯಕ್ಷೆ ವೃಂದಾ ಪೂಜಾರಿ ಮೊದಲಾದವರು ವೇದಿಕೆಯಲ್ಲಿದ್ದರು ಉಪಸ್ಥಿತರಿದ್ದರು. ರೋಟರಿ ಜಿಲ್ಲಾ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಫರಂಗಿಪೇಟೆ ಕಾರ್ಯದರ್ಶಿ ರಮೇಶ್ ಶೆಟ್ಟಿ ನಡಿಗುತ್ತು, ರೋಟರಿ ವಲಯ ಸೇನಾನಿ ರಮೆಶ್ ತುಂಬೆ, ರೋಟರಿ ಕ್ಲಬ್ ಫರಂಗಿಪೇಟೆ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಪ್ರಮುಖರಾದ ಎಂ.ಆರ್. ನಾಯರ್, ಸುಖೇಶ್ ಶೆಟ್ಟಿ ತೇವು, ಪದ್ಮನಾಭ ಶೆಟ್ಟಿಪುಂಚಮೆ , ಪ್ರಕಾಶ್ ಕಿದೆಬೆಟ್ಟು, ಸುಕುಮಾರ್, ಪ್ರಶಾಂತ್ ತುಂಬೆ, ಮೋಹನ್ ಬೆಂಜನಪದವು, ಎಂ.ಕೆ. ಖಾದರ್, ಅಬ್ದುಲ್ ಲತೀಫ್, ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

ಟ್ರಸ್ಟಿ ದೇವದಾಸ್ ಶೆಟ್ಟಿ ಕೊಡ್ಮಾಣ್ ಸ್ವಾಗತಿಸಿದರು. ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಕಾರ್ಯಕ್ರಮ ನಿರೂಪಿಸಿದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...