Friday, April 5, 2024

ಬಡಗಕಜೆಕಾರು ಗ್ರಾ.ಪಂನಲ್ಲಿ ಹರ್ ಘರ್ ಜಲ್ ಘೋಷಣೆ ಕಾರ್ಯಕ್ರಮ

ದಕ್ಷಿಣ ಕನ್ನಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಕಾರ್ಯಕ್ರಮ ನಡೆಯಿತು.

ಜಲ ಜೀವನ್ ಮಿಷನ್ ಆಶಯದಂತೆ ಎಲ್ಲಾ ಮನೆಗಳಿಗೂ ನಳ್ಳಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್ ತನ್ನ ಗುರಿ ಮುಟ್ಟಿದೆ. ಬಡಗಕಜೆಕಾರುಗ್ರಾಮ ಪಂಚಾಯತ್ ನಲ್ಲಿ ಹರ್ ಘರ್ ಜಲ್ ಘೋಷಣೆ ಕಾರ್ಯಕ್ರಮ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಆಸ್ಮಾ, ಉಪಾಧ್ಯಕ್ಷರಾದ ಡೀಕಯ್ಯ ಬಂಗೇರ, ಪಂ. ಅ. ಅಧಿಕಾರಿಗಳು ˌ ಪಂಚಾಯತ್ ಸದಸ್ಯರುˌ ಪಂಪು ಚಾಲಕರುˌ ಪಂಚಾಯತ್ ಸಿಬ್ಬಂದಿಗಳುˌ ಆಶಾ ಕಾರ್ಯಕರ್ತೆಯರುˌ ಆರೋಗ್ಯ ಸಹಾಯಕಿಯರು ˌ ಗ್ರಾಮಸ್ಥರು ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಬಡಗಕಜೆಕಾರು, ತೆಂಕಕಜೆಕಾರು ಈ ಎರಡು ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಣೆ ಮಾಡಲಾಯಿತು.

ಪಂಚಾಯತ್ ಅಧ್ಯಕ್ಷರು ಮಾತನಾಡಿ ಜಲಜೀವನ್ ಮಿಷನ್ ನ ಅನುಷ್ಠಾನ ಯಶಸ್ವಿಯಾಗಿದೆ. ಸರ್ಕಾರದ ಈ ಯೋಜನೆ ಗ್ರಾಮದ ಪ್ರತಿಯೋಬ್ಬರಿಗೂ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸಿ ಕೊಡುವಲ್ಲಿ ಸಫಲವಾಗಿದೆ ಆದುದರಿಂದ ಎರಡು ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲು ಸಂತೋಷವಾಗುತ್ತದೆ ಎಂದು ತಿಳಿಸಿದರು.

ಜಲಜೀವನ್ ಮಿಷನ್ ನ ಯೋಜನಾ ವ್ಯವಸ್ಥಾಪಕ ಶ್ರೀ ವಿಘ್ನೇಶ್ ರಾಜ್ˌ ಅನುಷ್ಠಾನ ಬೆಂಬಲ ಸಂಸ್ಥೆಯ ತಂಡದ ನಾಯಕರಾದ ಶಿವರಾಮ್, ಚರಣ್ ರಾಜ್ˌ ಅಶ್ವಿನ್, ಅನುಷ್ಠಾನ ಬೆಂಬಲ ಸಂಸ್ಠೆ – 2ನ ಸಿಬ್ಬಂದಿಗಳಾದ ವಿಲ್ಮಾ ಮತ್ತು ಚಂದ್ರಶೇಖರ್ ಉಪಸ್ಠಿತರಿದ್ದರು.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...