Thursday, April 18, 2024

2022-23ನೇ ಸಾಲಿನ ಕುಂಭಶ್ರೀ ವೈಭವದ ಪೂರ್ವಭಾವಿ ಸಭೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು ನಿಟ್ಟಡೆ ವೇಣೂರು2022-23ನೇ ಸಾಲಿನ ಕುಂಭಶ್ರೀ ವೈಭವದ ಬಗ್ಗೆ ಪೂರ್ವಭಾವಿ ಸಭೆ ಶಾಲೆಯಲ್ಲಿ ಜರಗಿತು.

ಪದವಿ ಪೂರ್ವ ಕಾಲೇಜಿನ ಕುಂಭಶ್ರೀ ವೈಭವದ ಆಚರಣಾ ಸಮಿತಿಯ ಅಧ್ಯಕ್ಷರಾದ ಗುರುಪ್ರಕಾಶ್ ಕಕ್ಕೆಪದವು ಮತ್ತು ಪ್ರೌಢಶಾಲಾ ವಿಭಾಗದ ಕುಂಭಶ್ರೀ ವೈಭವದ ಅಧ್ಯಕ್ಷ ಹರೀಶ್ ಪೂಕ್ಕಿ ಹಾಗೂ ನಮ್ಮ ಶಾಲಾ ಸಂಚಾಲಕ ಗಿರೀಶ್ ಕೆ ಹೆಚ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಕಳೆದ ಐದು ವರ್ಷಗಳಿಂದ ಕಾರಣಾಂತರಗಳಿಂದ ನಡೆದಿಲ್ಲ. ದಿನಾಂಕ 2023 ಜ.01  ರಂದು ನಡೆಸುವುದೆಂದು ತೀರ್ಮಾನಿಸಲಾಗಿದೆ. ಸುಮಾರು 5000 ಜನರು ಸೇರುವ ನಿರೀಕ್ಷೆಯಿದೆ. ಕುಂಭಶ್ರೀ ವೈಭವಕ್ಕೆ ಬೇಕಾಗುವ ಖರ್ಚು ವೆಚ್ಚದ ಬಗ್ಗೆ ಮತ್ತು ಸಮಿತಿ ರಚನೆ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೊಮನ ಮೇಡಂ ಹಾಗೂ  ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶೋಭಾ ಎಲ್ಎನ್ ರಾವ್ ಮತ್ತು ಕುಂಭಶ್ರೀ ವೈಭವ ಸಮಿತಿಯ ಎಲ್ಲಾ ಉಪಾಧ್ಯಕ್ಷರುಗಳು ಮತ್ತು ಎಲ್ಲಾ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು, ಶಿಕ್ಷಕರು ಉಪಸ್ಥಿತರಿದ್ದರು.

ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪವಿತ್ರ ಮೇಡಂ ನಿರೂಪಿಸಿ , ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಜಿ ಮೇಡಂ ಸ್ವಾಗತಿಸಿ, ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಅಕ್ಷತಾ ಮೇಡಂ ವಂದಿಸಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...