Thursday, April 11, 2024

ಬೆಸ್ಟ್ ಆಂಗ್ಲ ಮಾದ್ಯಮ ಶಾಲೆಯ ವತಿಯಿಂದ ಅದ್ದೂರಿ ಕ್ರೀಡಾ ಕೂಟಕ್ಕೆ ಬಿ.ರಮಾನಾಥ ರೈ ಚಾಲನೆ

ಬೆಸ್ಟ್ ಆಂಗ್ಲ ಮಾದ್ಯಮ ಶಾಲೆ ಬಿ. ಸಿ ರೋಡ್ ಇದರ ಸಂಯುಕ್ತ ಆಶ್ರಯದಲ್ಲಿ ಮೊಡಂಕಾಪು ಇನ್ಫೆಂಟ್ ಜೀಸಸ್ ಕ್ರೀಡಾಂಗಣದಲ್ಲಿ ನಡೆದ ಬಂಟ್ವಾಳ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಸಮಾರಂಭದ ಉದ್ಘಾಟನಾ ಕಾರ್ಯಕ್ರಮವನ್ನು ಬಂಟ್ವಾಳ ಏಜುಕೇಶನ್ ಸರ್ವಿಸ್ ಟ್ರಸ್ಟಿನ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ನೆರವೇರಿಸಿ ಬಳಿಕ ಬಂಟ್ವಾಳ ವಲಯ ಮಟ್ಟದ ಕ್ರೀಡಾಕೂಟದ ಧ್ವಜಾರೋಹಣವನ್ನು ಬಿ.ಸಿ ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕರಾದ ಧನಭಾಗ್ಯ ಆರ್ ರೈ ರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಇನ್ಫೆಂಟ್ ಜೀಸಸ್ ಚರ್ಚಿನ ಮುಖ್ಯ ಗುರುಗಳು ಫಾದರ್ ವೆಲೇರಿಯನ ಡಿ ಸೋಜಾ ರವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಆಡಳಿ ಅಧಿಕಾರಿ ಶ್ರೀ ಮಹಾಬಲ ಆಳ್ವ. ಟ್ರಸ್ಟಿನ ಸದಸ್ಯರುಗಳಾದ ಶ್ರೀ ಮತಿ ರಶ್ಮಿ ಎಸ್. ಪೂಜಾ, ಸುಮ ಎಂ. ಆಳ್ವಾ,ಕಾರ್ಯಕ್ರಮದಲ್ಲಿ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀ.ಮತಿ ಸುನಿತಾ ಬಿ. ಟಿ ರವರು ಸ್ವಾಗತವನ್ನು ಕೋರಿದರು.

ಪ್ರಮುಖರಾದ ಬಂಟ್ವಾಳ ಕ್ಷೇತ್ರದ ಶಿಕ್ಷಣಾಧಿಕಾರಿ ಜ್ಞಾನೇಶ್.ಪಿ ಇ.ಸಿ.ಒ ಸುಜಾತ, ಇ.ಸಿ.ಒ ಸುಧಾ. Tpo ವಿಷ್ಣು ನಾರಾಯಣ ಹೆಬ್ಬಾರ್ 3 ವಲಯದ CRP ಗಳು ನಂದಾ, ಪ್ರೇಮಲತಾ, ಪ್ರದೀಪ್ ಬಂಟ್ವಾಳ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರು ರತ್ನಾವತಿ, ಬಂಟ್ವಾಳ ವಲಯದ ನೋಡಲ್ ಅಧಿಕಾರಿ ಶಿವಪ್ರಸಾದ್ ರೈ. ಜಿಲ್ಲಾ ಉಪಾಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನವೀನ್ನವರು, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಇನ್ವೆಂಟ್ ಜೀಸಸ್ ಶಾಲೆ ಮುಖ್ಯ ಗುರುಗಳು, ದೀಪಿಕಾ ಪ್ರೌಢಶಾಲೆಯ ಮುಖ್ಯ ಗುರುಗಳು, ಕ್ರೀಡಾಂಗಣವನ್ನು ಕೊಟ್ಟು ಸಹಕರಿಸಿದರು ದೀಪಿಕಾ ಪ್ರೌಢಶಾಲೆ, ಮೊಡಂಕಾಪು. ಇವರುಗಳು. ಬೆಂಜನಪದವು ಶಾಲೆಯ ಮುಖ್ಯ ಗುರುಗಳು. ಎಲ್ಲಾ 3 ವಲಯಗಳ ದೈಹಿಕ ಶಿಕ್ಷಣ ಶಿಕ್ಷಕರು ವ್ಯವಸ್ಥಾಪಕರು.

ಇನ್ನು ಕ್ರೀಡಾ ಜ್ಯೋತಿಯನ್ನು ರಕ್ತೇಶ್ವರಿ ದೇವಸ್ಥಾನದಿಂದ ದೀಪಿಕಾ ಪ್ರೌಢಶಾಲೆಯ ಕ್ರೀಡಾಂಗಣ ಮಾಡಂಕಾಪು ಮೆರವಣಿಗೆಯ ಮೂಲಕ ಬಂದು ಬಳಿಕ ಅದನ್ನು ಪಾರಿವಾಳಗಳನ್ನು ಬಿಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕ್ರೀಡಾ ಪ್ರತಿಜ್ಞೆ ಯನ್ನು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಿತ್ ಪ್ರತಿಜ್ಞೆ ವಿಧಿಯನ್ನು ವಾಚಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಸುವನಾರವರು ನಿರೂಪಿಸಿದರು.

ಕಾರ್ಯಕ್ರಮದ ವಂದನಾರ್ಪಣೆಯನ್ನು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಸನ್ಮೆತಾ ರವರು ನೆರವೇರಿಸಿದರು.

 

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...