Friday, April 12, 2024

ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ‘ಕನ್ನಡ ಡಿಂಡಿಮ -2022’

ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ನಾಡು, ನುಡಿ ಬಗ್ಗೆ ಆಸಕ್ತಿ ಮೂಡಿಸಬೇಕು. ಅದಕ್ಕೆ ಮಕ್ಕಳನ್ನು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ಶೈಕ್ಷಣಿಕ ಸಂಸ್ಥೆಗಳು ಆಯೋಜಿಸಬೇಕು. ಆಗ ಮಾತ್ರ ಮಕ್ಕಳು ಹೆಚ್ಚು ಕ್ರಿಯೇಟಿವ್ ಆಗಿ ಇರುತ್ತಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ, 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಸಮ್ಮೇಳನಾಧ್ಯಕ್ಷ, ಪತ್ರಕರ್ತ ಶಂಶೀರ್ ಬುಡೋಳಿ ಅಭಿಪ್ರಾಯಪಟ್ಟರು.

ಅವರು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕಂಬಳಬೆಟ್ಟುವಿನಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ನಡೆದ ‘ಕನ್ನಡ ಡಿಂಡಿಮ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಓದುವುದು, ಬರೆಸುವುದು ಮಾತ್ರ ಶಿಕ್ಷಣ ಅಲ್ಲ. ಕ್ರಿಯಾಶೀಲ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಅವರು ವಿಶೇಷವಾಗಿ ಬೆಳೆಯಲು ಸಾಧ್ಯ ಎಂದರು. ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಸಂದೇಶ ಭಾಷಣ ಮಾಡಿದರು.

ಇದೇ ವೇಳೆ ಮಾಧ್ಯಮ ಕ್ಷೇತ್ರ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದನ್ನು ಗುರುತಿಸಿ ಶಂಶೀರ್ ಬುಡೋಳಿ ಅವರನ್ನು ಗಣ್ಯರ ಸಮ್ಮುಖದಲ್ಲಿ ‘ಜನಪ್ರಿಯ’ ಪುರಸ್ಕಾರ ಮಾಡುವ ಮೂಲಕ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ಆಡಳಿತ ಮಂಡಳಿಯ ನಿರ್ದೇಶಕ ನೌಶೀನ್ ಬದ್ರಿಯಾ, ಪ್ರಾಂಶುಪಾಲೆ ಪ್ರಿಯಾ ದುರೈರಾಜ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಫೀಸ ಸ್ವನೀಹ ಸ್ವಾಗತಿಸಿದರು. ಶಝ್ನ ವಂದಿಸಿದರು. ಹಿಬಾ ಮರಿಯಂ ಮತ್ತು ಝುಲ್ಫಾ ಕಾರ್ಯಕ್ರಮ ನಿರೂಪಿಸಿದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...