Thursday, April 11, 2024

ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಭ್ರಷ್ಟಾಚಾರ ಮುಕ್ತ ಭಾರತದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ.) ಬಂಟ್ವಾಳ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಅರಿವು ಸಪ್ತಾಹ 2022 ರ ಪ್ರಯುಕ್ತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಭ್ರಷ್ಟಾಚಾರ ಮುಕ್ತ ಭಾರತದ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ದ ಬಂಟ್ವಾಳ ಡಿ.ವೈ.ಎಸ್.ಪಿ‌.ಪ್ರತಾಪ್ ಸಿಂಗ್ ಥೋರಾಟ್ ಮಾತನಾಡಿ,
ಪೋಲೀಸರು ಮಾತ್ರವಲ್ಲ ಸಾರ್ವಜನಿಕರು ಕೂಡ ಭ್ರಷ್ಟಾಚಾರ ಮುಕ್ತ ದೇಶಕ್ಕಾಗಿ ಸಹಕಾರ ನೀಡಬೇಕಾಗಿದೆ.
ದೇಶದ ಅಭಿವೃದ್ಧಿಗೆ ದೊಡ್ಡ ಶಾಪವಾಗಿರುವ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಸಾರ್ವಜನಿಕ ಸಹಕಾರ ಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ನಗರ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರು ವಹಿಸಿದ್ದರು.

ಮಂಗಳೂರು ಲೋಕಾಯುಕ್ತ ಡಿ.ವೈ.ಎಸ್. ಪಿ‌.ಚೆಲುವರಾಜ್, ನೋಟರಿ ನ್ಯಾಯಾವಾಧಿ ಪ್ರಸಾದ್ ಕುಮಾರ್ ವೈ, ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಎಚ್.ಗೌಡ, ಅಪರಾಧ ವಿಭಾಗದ ಎಸ್. ಐ.ಕಲೈಮಾರ್, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ಎಸ್. ಐ.ಹರೀಶ್ ಎಂ.ಆರ್, ಅಪರಾಧ ವಿಭಾಗದ ಎಸ್. ಐ.ಸಂಜೀವ ಕೆ.ಬಂಟ್ವಾಳ ಗ್ರಾಮಾಂತರ ಮಹಿಳಾ ಎಸ್.ಐ.ಭಾರತಿ, ಸಂಚಾರಿ ಪೋಲೀಸ್ ಠಾಣಾ ಎಸ್. ಐ.ಮರ‍್ತಿ ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...