Sunday, April 7, 2024

ಕಾಂತಾರದ ಪಂಜುರ್ಲಿ ದೈವದ ಪಾತ್ರದಂತೆ ಮುಖವರ್ಣಿಕೆ ಪ್ರಕರಣ : ಧರ್ಮಸ್ಥಳದಲ್ಲಿ ತಪ್ಪು ಕಾಣಿಕೆ ಅರ್ಪಿಸಿದ ಆಂಧ್ರದ ಯುವತಿ

ಬೆಳ್ತಂಗಡಿ: ಕಾಂತಾರ ಚಲನ ಚಿತ್ರದಲ್ಲಿರುವ ದೈವದ ಪಾತ್ರದಂತೆ ಮುಖವರ್ಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೈದರಾಬಾದ್ ಮೂಲದ ಯುವತಿ ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಸಲ್ಲಿಸಿ, ಡಾ| ಡಿ. ವೀರೇಂದ್ರ ಹೆಗ್ಗಡೆಯವರಲ್ಲಿ ಕ್ಷಮಾಪಣೆ ಕೇಳಿ ಆಶೀರ್ವಾದ ಪಡೆದ ಘಟನೆ ನಡೆದಿದೆ.

ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತ.ಎಸ್.ರೆಡ್ಡಿ. ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊAಡಿದ್ದಳು. ತುಳುನಾಡಿನ ಅತ್ಯಂತ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ. ಶ್ವೇತಾ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಕ್ಷೇತ್ರಕ್ಕೆ ಬಂದ ಶ್ವೇತ. ಎಸ್.ರೆಡ್ಡಿ ಮಂಜುನಾಥೇಶ್ವರ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ನಂತರ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆಯವರನ್ನ ಭೇಟಿ ಮಾಡಿ ಕ್ಷಮೆ ಕೇಳಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶ್ವೇತಾ, ಇದನ್ನು ತಿಳಿದು ಮಾಡಿರಲಿಲ್ಲ, ಯಕ್ಷಗಾನ ಪಾತ್ರ ಮತ್ತು ಇದು ಒಂದೇ ಎಂದುಕೊAಡಿದ್ದೆ. ಟೀಕೆಗಳು ಬಂದ ಬಳಿಕ ಬೇರೆ ಬೇರೆ ಎಂದು ತಿಳಿಯಿತು. ಸಮಸ್ತ ದೈವಾ ರಾಧಕರಲ್ಲಿ ಹಾಗೂ ಜನತೆಯಲ್ಲಿ ದಯವಿಟ್ಟು ಕ್ಷಮಿಸಿ ಎಂದು ಕೇಳಿಕೊಳ್ಳುವುದಾಗಿ ತಿಳಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...