Saturday, April 6, 2024

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಗ್ರೀಷ್ಮ

ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಕಿರಿಯ ವಿಭಾಗದ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಗ್ರೀಷ್ಮ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಗ್ರೀಷ್ಮ ಬಂಟ್ವಾಳ ಎಸ್ ವಿ ಎಸ್ ದೇವಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಕಿರಿಯ ವಿಭಾಗದ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಬಳಿಕ ಗ್ರೀಷ್ಮಾ ಇವಳನ್ನು ಶಾಲಾ ಅಸೆಂಬ್ಲಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ,ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...