Monday, April 8, 2024

ಬಡವರ ಸೇವೆಯನ್ನೇ ಧ್ಯೇಯವಾಗಿಸಿಕೊಂಡಿರುವ ವೀರಾಂಜನೇಯ ಸೇವಾ ಸಮಿತಿ ಮೂರು ಬಡಕುಟುಂಬಕ್ಕೆ ಸಹಾಯಧನದ ಹಸ್ತಾಂತರ

ಬಡವರ ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಕಳೆದ 5 ವರ್ಷಗಳಿಂದ ಸಮಾಜ ಸೇವೆ ಮಾಡುತ್ತಾ ಬಂದಿರುವ ವೀರಾಂಜನೇಯ ಸೇವಾ ಸಮಿತಿ ಮೂರು ಬಡಕುಟುಂಬಕ್ಕೆ ಸಹಾಯಹಸ್ತ ನೀಡಿ ತನ್ನ ಸೇವೆಯನ್ನು ಮುಂದುವರಿಸಿದೆ.

52ನೇ ಸೇವಾಯೋಜನೆಯಾಗಿ ಮೂಡಬಿದ್ರೆ ತಾಲೂಕಿನ ವಾಲ್ಪಡಿಯ ಸುಜಯ ಎಂಬವರು ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸಾ ವೆಚ್ಚಕ್ಕೆ ಈವರೆಗೆ ಸರಿಸುಮಾರು 2 ಲಕ್ಷದಷ್ಟು ಹಣ ಖರ್ಚು ಮಾಡಿದ್ದಾರೆ. ಈ ಬಡಕುಟುಂಬದ ಕಷ್ಟಕ್ಕೆ ಮರುಗಿದ ಶ್ರೀ ವೀರಾಂಜನೇಯ ಸೇವಾ ಸಮಿತಿ 10,000ರೂ ಸಹಾಯಧನದ ಚೆಕ್ಕನ್ನು ನೀಡಿದ್ದಾರೆ.

ಇನ್ನು 53ನೇ ಸೇವಾಯೋಜನೆಯಾಗಿ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕು.ಶಿಲ್ಪಾ ಎಂಬವರು ಕಳೆದ ಒಂದು ವಾರಗಳ ಹಿಂದೆ ತಲೆಯ ನರದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಬಡಕುಟುಂಬಕ್ಕೆ ಶ್ರೀ ವೀರಾಂಜನೇಯ ಸೇವಾ ಸಮಿತಿಯು 10,000ರೂ ಸಹಾಯಧನದ ಚೆಕ್ಕನ್ನು ಶಿಲ್ಪಾ ಇವರ ಬಡಕುಟುಂಬಕ್ಕೆ ಹಸ್ತಾಂತರಿಸಿದರು.

54ನೇ ಸೇವಾಯೋಜನೆಯಾಗಿ, ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪ್ರವೀಣ್ ಎಂಬವರ ತಾಯಿ ಕಳೆದ 8 ತಿಂಗಳುಗಳಿಂದ ಹಾಗೂ ಇವರ ಪತ್ನಿ 2 ತಿಂಗಳುಗಳಿಂದ ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದರು. ಈಗಾಗಲೇ ಹಲವಾರು ಸಾಲಮೂಲಗಳನ್ನು ಮಾಡಿ ಹಾಸ್ಪಿಟಲ್ನ ವೆಚ್ಚ ಭರಿಸಿದ್ದರು. ಈ ಬಡಕುಟುಂಬಕ್ಕೆ ಶ್ರೀ ವೀರಾಂಜನೇಯ ಸೇವಾ ಸಮಿತಿಯು 15,000ರೂ ಸಹಾಯಧನದ ಚೆಕ್ಕನ್ನು ಬಡಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...