Wednesday, April 10, 2024

ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ನೀಡಿದಾಗ ಮಾತ್ರ ಕ್ರೀಡೆಯಲ್ಲಿ ಸಾಧನೆ ಸಾಧ್ಯ-ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದುಶ್ಚಟಗಳಿಂದ ದೂರವಾಗಲು ಕ್ರೀಡಾ ಅತ್ಯಂತ ಉತ್ತಮ ಹವ್ಯಾಸವಾಗಿದ್ದು, ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಇತ್ತೀಚೆಗೆ ಮಂಗಳೂರಿನಲ್ಲಿ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ನ ವತಿಯಿಂದ 14 ಹಾಗೂ 16 ಮತ್ತು 18 ರ ವಯೋಮಾನದ ವಿದ್ಯಾರ್ಥಿಗಳಿಗೆ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೆಲುವು ಸಾಧಿಸಿದ ತಾಲೂಕಿನ ವಾಲಿಬಾಲ್ ಕ್ರೀಡಾ ಪಟುಗಳಿಗೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ (ರಿ.) ಇದರ ವತಿಯಿಂದ ಬಿಸಿರೋಡಿನ ರಂಗೋಲಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳು ದೈಹಿಕ ವಾಗಿ‌ ಬಲಾಡ್ಯರಾದಾಗ ಮಾನಸಿಕವಾಗಿ ಸದೃಢವಾಗಲು ಸಾಧ್ಯ ವಾಗುತ್ತದೆ. ದ.ಕ.ಜಿಲ್ಲೆಯ ಜನರಿಗೆ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುವಿಕೆ ಪ್ರಕೃತಿದತ್ತವಾದ ವರವಾಗಿದೆ, ಅಂತವರಿಗೆ ನುರಿತ ತರಬೇತುದಾರರಿಂದ ತರಭೇತಿ ಸಿಕ್ಕಿದರೆ ಉತ್ತಮ ಕ್ರೀಡಾ ಪಟುವಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ತಾಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವಾಗಿ ನಿರ್ಮಾಣಕ್ಕೆ ಹೆಚ್ಚಿನ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

ವಿದ್ಯಾರ್ಥಿಯಾಗಿದ್ದಾಗ ಕ್ರೀಡೆಯಲ್ಲಿ ಆಸಕ್ತಿ ಯಿರುವ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಸಹಕಾರ ನೀಡಿದಾಗ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ತಾಲೂಕಿನ 16 ರ ವಯೋಮಾನದ ಹುಡುಗರು ಪ್ರಥಮ, 14 ರ ವಯೋಮಾನದ ಹುಡುಗ ರು ಪ್ರಥಮ, ಹುಡುಗಿಯರು ದ್ವೀತಿಯ ಸ್ಥಾನ ಪಡೆದಿದ್ದು ಅತ್ಯಂತ ಸಂತಸವಾಗಿದ್ದು ಎಂದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ವೇದಿಕೆಯಲ್ಲಿ ತಾಲೂಕು ಶಿಕ್ಷಣಾಧಿಕಾರಿ ಜ್ಞಾನೇಶ್, ದೈಹಿಕ ಶಿಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಪ್ರಧಾನ‌ಕಾರ್ಯದರ್ಶಿ ಶಂಕರ್ ಶೆಟ್ಟಿ, ವಾಲಿಬಾಲ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ಸುಪ್ರೀತ್ ಅಳ್ವ, ಕೋಶಾದಿಕಾರಿ ಅಶ್ರಫ್, ಉದ್ಯಮಿ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ಸ್ವಾಗತಿಸಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಹಮ್ಮದ್ ಮುಸ್ತಾಪ ವಂದಿಸಿದರು. ಶಿಕ್ಷಕ ಜಗದೀಶ್ ರೈ ನಿರೂಪಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...