Wednesday, April 17, 2024

40% ಸರಕಾರ ಎಂದು ಹೆಸರು ವಾಸಿಯಾದ ಬಿಜೆಪಿ ಸರಕಾರ ಕೋವಿಡ್ ನ‌ ಹೆಸರಿನಲ್ಲಿ ಜನರಿಗೆ ಮೋಸ-ವಿಜಯ ಭಾಸ್ಕರ್

ಸರಕಾರ ತೆಗೆದುಕೊಂಡ ಕೆಲವೊಂದು ನಿರ್ಧಾರಗಳಿಂದ ಇಂದು ದೇಶದಲ್ಲಿ ನಿರುದ್ಯೋಗ ತಾಂಡವಾಳುತ್ತಿದ್ದು, ಅತೀ ದೊಡ್ಡ ಶತ್ರುವಾಗಿ ಜನರ ಜೀವ ಹಿಂಡುತ್ತಿದೆ ಎಂದು ಎ.ಐ.ಟಿ.ಯು.ಸಿ.ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ.ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಖಾಲಿಯಾದ ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಸರಕಾರ ಕೈಗೊಳ್ಳುತ್ತಿಲ್ಲ. 40 ಪರ್ಸೆಂಟ್ ಸರಕಾರ ಎಂದು ಹೆಸರು ವಾಸಿಯಾದ ಬಿಜೆಪಿ ಸರಕಾರ ಕೋವಿಡ್ ನ‌ ಹೆಸರಿನಲ್ಲಿ ಜನರನ್ನು ಮೋಸ ಮಾಡುತ್ತಿದೆ. ಕಟ್ಟಡ ಇಲಾಖೆಯಲ್ಲಿ ಸಾಕಷ್ಟು ಹಣವಿದೆ ಎಂಬ ಕಾರಣಕ್ಕಾಗಿ ಬೋಗಸ್ ಮೆಂಬರ್ ಶಿಪ್ ಮಾಡಿ ಹಣ ದೋಚುವ ಕಾರ್ಯವನ್ನು ಜನಪ್ರತಿನಿಧಿಗಳ ಹಿಂಬಾಲಕರು ಮಾಡುತ್ತಿದ್ಧಾರೆ ಎಂದು ಆರೋಪ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾರ್ಮಿಕರ ಬವಣೆ ದಿನೇ ದಿನೇ ಹೆಚ್ಚುತ್ತಿದ್ದು, ಅಸಂಘಟಿತ ಕಾರ್ಮಿಕರಿಗೆ ರಾಜ್ಯದಲ್ಲಿ ಜೀವನ ನಡೆಸುವುದೇ ದುಸ್ತರವಾಗಿದೆ. ನಿರಂತರವಾಗಿ ಏರುತ್ತಿರುವ ಬೆಲೆ ಏರಿಕೆಯಿಂದ ಜನಸಾಮಾನ್ಯರು ಏದುಸಿರು ಬಿಡುವಂತಾಗಿದೆ ಎಂದು ಹೇಳಿದರು.

ರೈತ ಸಮುದಾಯದ ಬಿಟ್ಟರೆ ಅತೀ ಹೆಚ್ಚು ಆತ್ಮಹತ್ಯೆ ಮಾಡಿಕೊಳ್ಳುವ ವರ್ಗ ಇದ್ದರೆ ಕೆ.ಎಸ್.ಆರ್.ಟಿ.ಸಿ.ನೌಕರರು ಅವರ ಸಮಸ್ಯೆ ಗಳನ್ನು ಆಲಿಸಿ ಪರಿಸ್ಥಿತಿ ಯನ್ನು ಸುಧಾರಣೆ ಮಾಡಬೇಕು ಎಂದರು.

ಕಟ್ಟಡ ಕಾರ್ಮಿಕರ ಬಗ್ಗೆ, ಬೀಡಿ ಉದ್ಯಮ ಬಗ್ಗೆ, ಕೆ.ಎಸ್.ಆರ್.ಟಿ.ಸಿ.ನೌಕರರ ಬಗ್ಗೆ, ಯೋಜನಾ ಕಾರ್ಮಿಕರ ಸಮಸ್ಯೆಗಳನ್ನು ಸರಕಾರ ಪರಿಹಾರ ಮಾಡಬೇಕು ಎಂದು ಒತ್ತಾಯ ಮಾಡಿದ ಅವರು, ಪಿಂಚಣಿದಾರರಿಗೆ ರೂ.6000 ಪಿಂಚಣಿ ನೀಡಬೇಕು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಚ್.ವಿ.ರಾವ್. ಶೇಖರ್, ಸುರೇಶ್ ಕುಮಾರ್, ಪ್ರವೀಣ್ ಕುಮಾರ್, ಸೀತಾರಾಮ ಮತ್ತಿತರ ರು ಉಪಸ್ಥಿತರಿದ್ದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...