Wednesday, April 10, 2024

ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಮದ್ರಸ ಕಟ್ಟಡದ ಉದ್ಘಾಟನೆ

ವಿಟ್ಲ : ಮಾಣಿ – ಕೊಡಾಜೆಯ ಬದ್ರಿಯಾ ಜುಮಾ ಮಸೀದಿ ಇದರ ವತಿಯಿಂದ ಇಲ್ಲಿ ಸುಮಾರು 32 ವರ್ಷಗಳ ಕಾಲ ಮುದರ್ರಿಸ್, ಖತೀಬ್ ರಾಗಿ ಸೇವೆ ಸಲ್ಲಿಸಿದ ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಕೊಡಾಜೆ ತರ್ಬಿಯತುಲ್ ಇಸ್ಲಾಂ ಮದರಸ ಇದರ ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.

ಮುಹಮ್ಮದ್ ಶಮೀಮ್ ತಂಙಳ್ ಕುಂಬೋಲ್ ಮದ್ರಸ ಮೇಲಂತಸ್ತಿನ ಕಟ್ಟಡವನ್ನು ಉದ್ಘಾಟಿಸಿ ದು:ಹಾ ನೆರವೇರಿಸಿದರು. ಮಸೀದಿ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್ ಅಧ್ಯಕ್ಷತೆ ವಹಿಸಿದ್ದರು.

ಸನ್ಮಾನ ಸ್ವೀಕರಿಸಿದ ಹಾಜಿ ಪಿ.ಕೆ.ಆದಂ ದಾರಿಮಿ ಮಾತನಾಡಿ ನನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನಾನು ಆಭಾರಿ ಯಾಗಿದ್ದೇನೆ ಎಂದರು.

ಎಸ್.ಬಿ.ದಾರಿಮಿ ಮಾತನಾಡಿ ಆದಂ ದಾರಿಮಿ ಅವರು 32 ವರ್ಷ ಸುದೀರ್ಘ ಸೇವೆ ಸಲ್ಲಿಸಿದ್ದಾರೆ ಎಂದಾದರೆ ಅವರ ಹಾಗೂ ಕೊಡಾಜೆ ಜಮಾಅತಿಗರ ಸಹನೆ ಹಾಗೂ ತಾಳ್ಮೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆ.ಅಬೂಬಕ್ಕರ್ ಕೊಡಾಜೆ, ಯೂಸುಫ್ ಹಾಜಿ ನೌಫಲ್, ಅದ್ದ ಹಾಜಿ ಕೊಡಾಜೆ, ಇಬ್ರಾಹಿಂ ಹಾಜಿ ಮಾಣಿ, ಮಸೀದಿ ಕೋಶಾಧಿಕಾರಿ ರಫೀಕ್ ಹಾಜಿ ಸುಲ್ತಾನ್, ಕಾರ್ಯದರ್ಶಿ ನವಾಝ್ ಭಗವಂತಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ವೇಳೆ ಆದಿಂ ದಾರಿಮಿ ಅವರಿಗೆ ಹೊಸ ಆಲ್ಟೋ 800 ಕಾರ್ ಉಡುಗೊರೆಯಾಗಿ ನೀಡಲಾಯಿತು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪ್ರಸ್ತಾವನೆ ಗೈದರು. ಇಬ್ರಾಹಿಂ ಕೆ.ಮಾಣಿ ಸನ್ಮಾನಿತರನ್ನು ಪರಿಚಯಿಸಿದರು. ಇಲ್ಯಾಸ್ ನೇರಳಕಟ್ಟೆ ಸ್ವಾಗತಿಸಿ, ನಿರೂಪಿಸಿದರು.

 

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...