Saturday, April 6, 2024

ದ್ವಿ ಚಕ್ರ ವಾಹನಕ್ಕೆ ಲಾರಿ ಡಿಕ್ಕಿ ; ತಂದೆ-ತಾಯಿ ಮೃತ್ಯು, ಮಕ್ಕಳಿಬ್ಬರಿಗೆ ಗಾಯ

ಮಂಗಳೂರು: ದ್ವಿ ಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದು, ಮಕ್ಕಳಿಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ರಸ್ತೆ ತೊಕ್ಕೊಟ್ಟುವಿನ ಕಲ್ಲಾಪು ಗ್ಲೋಬಲ್‌ ಮಾರ್ಕೆಟ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಜಪ್ಪಿನಮೊಗರು ನಿವಾಸಿ, ದ್ವಿಚಕ್ರ ವಾಹನ ಸವಾರ ಗಂಗಾಧರ್, ಪತ್ನಿ ನೇತ್ರಾವತಿ ಗಂಭೀರ ಗಾಯಗೊಂಡು ಆಸ್ಟತ್ರೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಮಕ್ಕಳಾದ ಜ್ಞಾನೇಶ್, ಮೋಕ್ಷಾ ಗಾಯಗೊಂಡಿದ್ದಾರೆ.

ಗಂಗಾಧರ್, ಪತ್ನಿ ಮಕ್ಕಳೊಂದಿಗೆ ಪಂಪ್ ವೆಲ್ ನಿಂದ ತೊಕ್ಕೊಟ್ಟು ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಹೋಗುತ್ತಿದ್ದ ಸಂದರ್ಭ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯತನದಿಂದ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನು ಅಪಘಾತದಲ್ಲಿ ಗಂಗಾಧರ್‌ ಹಾಗೂ ಪತ್ನಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಮಕ್ಕಳಿಬ್ಬರೂ ಗಾಯಗೊಂಡು ಖಾಸಗಿ ಆಸ್ಟತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...