Saturday, April 6, 2024

ಮೋದಿಯವರ ಆಡಳಿತದಿಂದ ದೇಶ ಸುಭದ್ರವಾಗಿದೆ: ಶಾಸಕ‌ ಮಠಂದೂರು

ವಿಟ್ಲ: ಭಯೋತ್ಪಾದನೆಯನ್ನು ಹುಟ್ಟಿಹಾಕಲು ಕಾರಣವಾದ ಕಾಂಗ್ರೆಸ್ ಮುಸ್ಲಿಂ ಪುಷ್ಟೀಕರಣ ಮಾಡುವ ಜತೆಗೆ ದೇಶದ ಅರಾಜಕತೆಗೆ ಕಾರಣವಾಗಿದೆ. ಮೋದಿಯವರ ಆಡಳಿತದಿಂದ ದೇಶ ಸುಭದ್ರವಾಗಿದೆ. ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಅರಳುವಂತೆ ಮಾಡಿದ ಭಾರತೀಯ ಜನತಾ ಪಾರ್ಟಿ ಭಾರತದ ಭೌಗೋಳಿಕ ವ್ಯಾಪ್ತಿಗೆ ಮುಟ್ಟಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ವಿಟ್ಲ ಅಕ್ಷಯ ಸಮುದಾಯ ಭವನದಲ್ಲಿ ಬಿ.ಜೆ.ಪಿ. ಗ್ರಾಮಾಂತರ ಮಂಡಲ ವಿಟ್ಲ ಮಹಾಶಕ್ತಿ ಕೇಂದ್ರದ ಕಮಲ ದೀಪ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಪುತ್ತೂರಿನ ಹಿರಿಯ ವೈದ್ಯ ಡಾ. ಎಂ. ಕೆ. ಪ್ರಸಾದ್ ಭಂಡಾರಿ ಮಾತನಾಡಿ ಹಣದ, ಅಧಿಕಾರದ ಆಸೆಯನ್ನು ಬಿಟ್ಟು ಹಿಂದುತ್ವಕ್ಕಾಗಿ ಕಾರ್ಯ ನಿರ್ವಹಿಸಬೇಕು. ಹಿಂದುತ್ವವನ್ನು ಉಳಿಸದಿದ್ದರೆ, ನಾವು ನೆಲೆ ಕಳೆದುಕೊಳ್ಳುವ ಪರಿಸ್ಥಿತಿ ಇದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯನ್ನು ಹೆಚ್ಚು ಮಾಡಿ ಪೆಟ್ರೋಲ್ ಉತ್ಪನ್ನಗಳ ಬೇಡಿಕೆ ಕಡಿಮೆಯಾಗುವುದರಿಂದ ಗಲ್ಫ್ ನ ಅಹಂಕಾರ ನಿಲ್ಲುತ್ತದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಲಂಚಮುಕ್ತವಾಗಬೇಕಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ವಹಿಸಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತರಾದ ಸಂಕಪ್ಪ ಗೌಡ, ಜತ್ತಪ್ಪ ಗೌಡ ಹಾಗೂ 180 ಹಿರಿಯರಿಗೆ ಗೌರವಿಸಲಾಯಿತು.

ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದರೆ ಮಾತನಾಡಿದರು. ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷ ಆರ್. ಸಿ. ನಾರಾಯಣ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತಿಶ್ ಶಾಂತಿವನ, ಯುವರಾಜ್, ಬೂಡಿಯಾರು ರಾಧಾಕೃಷ್ಣ ರೈ ಉಪಸ್ಥಿತರಿದ್ದರು.

ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ಎಂ. ವಿಟ್ಲ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಸಂಚಾಲಕ ರಾಮದಾಸ್ ಬಂಟ್ವಾಳ ಪ್ರಸ್ತಾವನೆಗೈದರು. ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ನಾಯ್ತೊಟ್ಟು ವಂದಿಸಿದರು. ಮೋಹನದಾಸ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...