Wednesday, April 17, 2024

ರಿಕ್ಷಾ ನಿಲ್ದಾಣದಲ್ಲಿ ಅಪಾಯಕಾರಿ ಗುಂಡಿ ಪತ್ತೆ : ಕಳಪೆ ಕಾಮಗಾರಿ ವಿರುದ್ಧ ಸ್ಥಳೀಯರಿಂದ ಆಕ್ರೋಶ

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ಪತ್ತೆಯಾಗಿದ್ದು, ಇನ್ನು ಕಳಪೆ ಕಾಮಗಾರಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಈ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ಗುಂಡಿ ಸುಮಾರು 5 ಅಡಿಯಿದ್ದು, ಇಲ್ಲಿ ದಿನನಿತ್ಯ ನೂರಾರು ವಾಹನಗಳು ಚಲಿಸುತ್ತದೆ. ಸಮೀಪದ ಕಿಸಾನ್ ಟ್ರೆಡರ್ಸ್ ಗೆ ಹತ್ತಾರು ಟನ್ ಗಳಷ್ಟು ರಸಗೊಬ್ಬರ ಹೊತ್ತು ಬೃಹತ್ ಗಾತ್ರದ ಲಾರಿಗಳು ಬರುತ್ತದೆ. ಆದರೆ ಈಗಾಗಲೇ ಗುಂಡಿ ಬಿದ್ದು ವಾರವಾಗಿದ್ದರೂ ಈ ತನಕವೂ ಪಟ್ಟಣ ಪಂಚಾಯತ್ ಅಪಾಯಕಾರಿ ಗುಂಡಿ ಮುಚ್ಚಲು ಯಾವುದೇ ಕ್ರಮ ಕೈಗೊಳ್ಳದೆ ಮೌನವಾಗಿದೆ. ಸಧ್ಯ ಈ ಬಗ್ಗೆ ರಿಕ್ಷಾ, ಜೀಪ್ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.