Saturday, April 20, 2024

ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶ : ಓರ್ವ ಸಾವು, ಮತ್ತೊರ್ವ ಗಂಭೀರ

ಬೆಳ್ತಂಗಡಿ: ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ಸ್ಪರ್ಶವಾಗಿ ಓರ್ವ ಸಾವನ್ನಪ್ಪಿ ಮತ್ತೊರ್ವ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ.

ಕಾರ್ಮಿಕ ಸಂಘದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ ಬೆಳ್ತಂಗಡಿ ಬಸ್ ನಿಲ್ದಾಣದ ಪಕ್ಕದ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಗೂಡ್ಸ್ ಆಟೋದಲ್ಲಿ ಬ್ಯಾನರ್ ತಂದು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಮಂಗಳವಾರ ಸಂಜೆ ಅಳವಡಿಸುತ್ತಿದ್ದರು.

ಆದ್ರೆ ಸಂಜೆ 7 ಗಂಟೆ ಸುಮಾರಿಗೆ ಬ್ಯಾನರ್ ನ ಕಬ್ಬಿಣ ರಾಡ್ ವಿದ್ಯುತ್ ಲೈನ್ ನ ತಂತಿಗೆ ತಾಗಿದ್ದು, ಈ ವೇಳೆ ಕೆಲಸದ ಇಬ್ಬರು ಯುವಕರಿಗೆ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಎಸೆಯಲ್ಪಟ್ಟಿದ್ದಾರೆ. ಸ್ಥಳೀಯರ ಸಹಕಾರದಲ್ಲಿ ಇಬ್ಬರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಆದ್ರೆ ಚಿಕಿತ್ಸೆ ಫಲಿಸದೆ ಬೆಳ್ತಂಗಡಿ ಕೋರ್ಟ್ ನಿವಾಸಿ ವ್ಯಾಸರಾಯ ಅಚಾರ್ಯ ಅವರ ಪುತ್ರ ಗೂಡ್ಸ್ ವಾಹನ ಚಾಲಕ ಪ್ರಶಾಂತ್ ಅಚಾರ್ಯ ಸಾವನ್ನಪ್ಪಿದ್ದು, ಬೆಳ್ತಂಗಡಿ ತಾಲೂಕು ಕೊಯ್ಯರು ಗ್ರಾಮದ ಮಲೆಬೆಟ್ಟು ನಿವಾಸಿ ಸಂಜೀವ ಅಚಾರ್ಯ ಅವರ ಮಗನಾದ ಸತೀಶ್ ಗಂಭೀರ ಗಾಯಗೊಂಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ದುರ್ಘಟನೆಯ ಮಾಹಿತಿ ಪಡೆದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಕೂಡಲೇ ಆಸ್ಪತ್ರೆಗೆ ಧಾವಿಸಿದ್ದು ವೈದ್ಯರರೊಂದಿಗೆ ಮಾತುಕತೆ ನಡೆಸಿದ್ದಾರೆ. ಜೊತೆಗೆ ಮೃತರ ಮತ್ತು ಗಾಯಾಳುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

 

More from the blog

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...