Thursday, April 18, 2024

ಹಾರಾಡಿ ರೈಲ್ವೆ ನಿಲ್ದಾಣ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ – ನ.2ರಂದು ಶಿಲಾನ್ಯಾಸ ಸಮಾರಂಭ-ಜೀವಂಧರ ಜೈನ್

ಪುತ್ತೂರು: ಪುತ್ತೂರಿನ ಬಹುನಿರೀಕ್ಷಿತ ಹಾರಾಡಿ – ರೈಲ್ವೆ ನಿಲ್ದಾಣ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಗೆ ರೈಲ್ವೆ ಇಲಾಖೆ ಅನುಮತಿ ನೀಡಿದ್ದು, ನಗರಸಭೆಯ 1.05 ಕೋಟಿ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ಇದರ ಶಿಲಾನ್ಯಾಸ ಸಮಾರಂಭ ನವೆಂಬರ್ 2ರಂದು ಬುಧವಾರ ನಡೆಯಲಿದೆ ಎಂದು ನಗರಸಭೆ ಅಧ್ಯಕ್ಷ ಜೀವಂಧರ ಜೈನ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರಾಡಿಯಲ್ಲಿ ಸಮಾರಂಭ ನಡೆಯಲಿದೆ.

ಸಂಸದರಾದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ, ರೈಲ್ವೆ ಇಲಾಖೆಯ ಎಂಜಿನಿಯರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿ ಬರುವ ಹಾರಾಡಿ ರೈಲ್ವೆ ಸೇತುವೆಯ ತಳಭಾಗದಿಂದ ಕವಲೊಡೆದ ರೈಲ್ವೆ ನಿಲ್ದಾಣ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾರ್ಯ ಕಳೆದ 40 ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿತ್ತು. ರಸ್ತೆಯು ರೈಲ್ವೆಯ ಸೊತ್ತಾಗಿರುವ ಕಾರಣ ನಗರಸಭೆ ಅಭಿವೃದ್ಧ ಮಾಡುವಂತಿರಲಿಲ್ಲ. ಇದೀಗ ರಸ್ತೆ ಅಭಿವೃದ್ಧಿಗೆ ರೈಲ್ವೆ ನಿರಕ್ಷೇಪಣಾ ಪತ್ರ ನೀಡಿದೆ. ಅದರಂತೆ 740 ಮೀಟರ್ ಉದ್ದದ ರಸ್ತೆಯನ್ನು 5.5 ಮೀಟರ್ ಅಗಲಕ್ಕೆ ಕಾಂಕ್ರೀಟೀಕರಣ ಮಾಡಲಾಗುವುದು. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಅನೇಕ ಮಂದಿ ಬಿಡ್ ದಾಖಲಿಸಿದ್ದಾರೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಮುಗಿದು ಕೆಲಸ ಆರಂಭಗೊಳ್ಳಲಿದ್ದು, ಜನವರಿ ವೇಳೆ ನೂತನ ರಸ್ತೆ ಉದ್ಘಾಟನೆಗೊಳ್ಳಲಿದೆ ಎಂದು ಅವರು ನುಡಿದರು.

ಪಿಎಂ ಸ್ವ ನಿಧಿ ಯೋಜನೆಯಡಿಯಲ್ಲಿ ಸಾಲ ಪಡೆದು ಬೀದಿ ಬದಿ ವ್ಯಾಪಾರ ನಡೆಸುತ್ತಿರುವ 192 ಫಲಾನುಭವಿಗಳಿಗೆ ಇದೇ ವೇಳೆ ಗುರುತಿನ ಫಲಕ ಮತ್ತು ಪ್ರೋತ್ಸಾಹ ಪತ್ರ ವಿತರಣೆ ಮಾಡಲಾಗುವುದು. ಡಾ.ಬಿ. ಆರ್.ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ತಲಾ 2 ಲಕ್ಷ ರೂಪಾಯಿಗಳಂತೆ 10 ಫಲಾನುಭವಿಗಳಿಗೆ 20 ಲಕ್ಷ ರೂ. ಮಂಜೂರಾಗಿದೆ. ವಾಜಪೇಯಿ ವಸತಿ ಯೋಜನೆಯಲ್ಲಿ ತಲಾ 1.20 ಲಕ್ಷ ರೂ.ಗಳಂತೆ 16 ಫಲಾನುಭವಿಗಳಿಗೆ 19.20 ಲಕ್ಷ ರೂ. ಮಂಜೂರಾಗಿದೆ. ಈ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಣೆ ಮಾಡಲಾಗುತ್ತದೆ.
ಸ್ವಚ್ಛ ಭಾರತ್ ಯೋಜನೆಯ ಅಡಿಯಲ್ಲಿ ಸ್ವಚ್ಛ ಸರ್ವೇಕ್ಷಣ-2023ರ ಅಂಗವಾಗಿ ಟಾಯ್ಕಾಥಾನ್ ಕಾರ್ಯಕ್ರಮ ಅಡಿಯಲ್ಲಿ ನಿರುಪಯುಕ್ತ ವಸ್ತುಗಳಿಂದ ಆಟಿಕೆ ಅಥವಾ ಇನ್ನಿತರ ಪ್ರದರ್ಶಕ ಸಾಮಗ್ರಿಗಳನ್ನು ತಯಾರಿಸುವ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿತ್ತು. ನಗರಸಭಾ ವ್ಯಾಪ್ತಿಯ ಅನೇಕ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪೌರಾಯುಕ್ತರಾದ ಮಧು ಎಸ್. ಮನೋಹರ್, ಸ್ಥಾಯಿ ಸಮತಿ ಅಧ್ಯಕ್ಷರಾದ ಬಾಲಚಂದ್ರ ಕೆಮ್ಮಿಂಜೆ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು.

More from the blog

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...