


ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗ ದಲ್ಲಿ 67 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಅಮ್ಮುಂಜೆ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣ ತಂತ್ರಿ ಇವರು ದೀಪ ಪ್ರಜ್ವಲಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜು ಉಪನ್ಯಾಸಕ ಮೇದಪ್ಪ ಆಶಯ ಭಾಷಣ ಮಾಡಿದರು.
ಸಂಸ್ಥೆಯ ಪ್ರಾಂಶುಪಾಲೆ ಕವಿತಾ, ಉಪಪ್ರಾಂಶುಪಾಲರಾದ ಅನಂತಪದ್ಮನಾಭ ಶಿಬರೂರು ನೂರ್ ಮಹಮ್ಮದ್, ಶ್ರೀದೇವಿ ಪ್ರೌಢಶಾಲಾ ವಿಭಾಗದ ಶಿಕ್ಷಕರು, ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.
ಬಳಿಕ ಇಂಟರ್ಯಾಕ್ಟ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ರವಿಚಂದ್ರ ಮಯ್ಯ ವಂದಿಸಿದರು


