Saturday, April 6, 2024

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಧರ್ಮಸ್ಥಳ ದೇವಳದ ಮುಖ್ಯ ಲೇಖಾಧಿಕಾರಿಯಾಗಿರುವ  ಪುರಂದರ ಭಟ್ ಆಗಮಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಏಕೀಕರಣ ಕನ್ನಡ ನಾಡು ನುಡಿಯ ವೈಭವ ಕುರಿತು ವಿಸ್ತಾರವಾಗಿ ವಿವರಿಸಿದರು. ಕನ್ನಡ ಕವಿಗಳ ಸಾಹಿತ್ಯವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡಿದರು.

ತದನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹಾಡು ನೃತ್ಯಗಳ ಮುಖಾಂತರ ಅನಾವರಣಗೊಳಿಸಿದರು.

ಶಾಲಾ ಮುಖ್ಯ ಉಪಾಧ್ಯಾಯಿನಿ ಪರಿಮಳ ಎಂ.ವಿ ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಮಹಿಮಾ ನಿರ್ವಹಿಸಿ , ಪ್ರಾಪ್ತಿ ಸ್ವಾಗತಿಸಿ, ಸ್ತುತಿ ಸರ್ವರನ್ನು ವಂದಿಸಿದರು. ಶಾಲಾ ಶಿಕ್ಷಕ ವೃಂದ ಹಾಗು ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸಾಕ್ಷಿಗಳಾದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...