Wednesday, April 10, 2024

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 67ನೇ ಕನ್ನಡ ರಾಜ್ಯೋತ್ಸವ

ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಿತು.

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ರಾಷ್ಟ್ರ ಧ್ವಜಾರೋಹಣಗೈದು, ವಂದನೆ ಸ್ವೀಕರಿಸಿ ಮಾತನಾಡಿ, ಪಾಶ್ಚಾತ್ಯ ಭಾಷೆಗಳ ಧಾವಂತದಿಂದ ಹಿಂದೆ ಹರಿದು ಹಂಚಿ ಹೋಗಿದ್ದ ಕನ್ನಡ ನಾಡಿನ ಪ್ರದೇಶಗಳನ್ನು ಕರ್ನಾಟಕದ ಏಕೀಕರಣದ ಮೂಲಕ ಒಂದಗೂಡಿಸಿ ಎರಡು ಸಾವಿರ ರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯನ್ನು ಉಳಿಸುವಲ್ಲಿ ಶ್ರಮಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಚೀನ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲರ ಕರ್ತವ್ಯವಾಗಿದೆ ಎಂದರು.

ಶಾಸಕ ಸಂಜೀವ ಮಠಂದೂರು ಕನ್ನಡ ಧ್ವಜಾರೋಹಣ ಮಾಡಿದರು. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪೊಲೀಸ್ ಉಪಾಧೀಕ್ಷಕ ವೀರಯ್ಯ ಹಿರೇಮಠ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಹಸೀಲ್ದಾರ್ ನಿಸರ್ಗಪ್ರಿಯ ಜೆ., ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಉಪಸ್ಥಿತರಿದ್ದರು. ಶ್ರೀ ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ನಾಡಗೀತೆ ಪ್ರಸ್ತುತಗೊಂಡಿತು.

ಬಳಿಕ ಪುರಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ತಾಲೂಕು ಪ್ರಶಸ್ತಿಯನ್ನು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿ.ಬಿ.ಅರ್ತಿಕಜೆ (ಸಾಹಿತ್ಯ), ಎ.ಕೆ.ರೈ (ವೈದ್ಯ, ಸಮಾಜಸೇವೆ), ಸುರೇಶ್ ಬಲ್ನಾಡು (ಕೃಷಿ), ಹರೀಶ್ ಕೆಯ್ಯೂರು (ದೈವ ನರ್ತಕ) ಹಾಗೂ ಅನಘ ತೆಂಕಿಲ (ಕ್ರೀಡೆ) ಅವರಿಗೆ ಪೇಟ ತೊಡಿಸಿ, ಫಲಪುಷ್ಪ, ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಮಾತನಾಡಿ, ರಾಜ್ಯೋತ್ಸವಕ್ಕೆ ಪೂರ್ವಭಾವಿಯಾಗಿ ಕೋಟಿ ಕಂಠ ಗಾಯನದ ಮೂಲಕ ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಎಲ್ಲೆಡೆ ಚಾಲನೆ ನೀಡುವ ಮೂಲಕ ಕನ್ನಡ ಭಾಷೆಯನ್ನು ಮತ್ತೊಮ್ಮೆ ಜಗತ್ತಿಗೆ ಪರಿಚಯಿಸುವ ಕೆಲಸ ಮಹತ್ತರವಾಗಿದೆ. ಕನ್ನಡ ನಾಡು, ನುಡಿ, ಸಂಸ್ಕøತಿಗೆ ಮುನ್ನುಡಿ ಬರೆಯುವ ಕೆಲಸ ಆಲೂರು ವೆಂಕಟ್ರಾಯ ಅವರಿಂದ ಆಗಿದೆ ಎಂದ ಅವರು, ಭಾಷೆ ವಿಶೇಷವಾಗಿ ನಾಡಿನ ಜನರನ್ನು ಆಕರ್ಷಿಸುವ ಜತೆಗೆ ನೆನಪು ಮಾಡುವ ಕೆಲಸದ ಜತೆಗೆ ಕನ್ನಡ ಭಾಷೆಯ ಉಳಿವಿನ ಬಗ್ಗೆ ಯೋಚನೆ ಮಾಡಲು ಕನ್ನಡ ರಾಜ್ಯೋತ್ಸವ ಸೂಕ್ತ ದಿನ. ಆದ್ದರಿಂದ ಮುಂದಿನ ದಿನಗಳಲ್ಲಿ ನಿರಂತರ ಕನ್ನಡ ನಾಡಿಗೆ ನೀಡುವ ಕೊಡುಗೆಯ ಕುರಿತು ನಾವೆಲ್ಲರೂ ಚಿಂತನೆ ಮಾಡಬೇಕಾಗಿದೆ ಎಂದರು.

ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆ.ಗೌರಿ, ಪೌರಾಯುಕ್ತ ಮಧು ಎಸ್. ಮನೋಹರ್,ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಉಪಸ್ಥಿತರಿದ್ದರು.

ಬಳಿಕ ಕೊಂಬೆಟ್ಟು ಸರಕಾರಿ ಪ್ರೌಢಶಾಲೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಬೆಥನಿ ಆಂಗ್ಲ ಮಾಧ್ಯಮ ಶಾಲೆ, ಸಂತ ಪೀಲೋಮಿನಾ ಪ್ರೌಢಶಾಲೆ ಹಾಗೂ ಮಾಯಿದೆ ದೇವುಸ್ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ನುಡಿ, ಸಾಂಸ್ಕೃತಿಯನ್ನು ಬಿಂಬಿಸುವ  ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...