Friday, April 5, 2024

ಹಾಡುಹಗಲೇ ಮನೆಗೆ ನುಗ್ಗಿದ ಖದೀಮರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಬಿಸಿರೋಡಿನ ಚಿಕ್ಕಯ್ಯಮಠದಲ್ಲಿ ನಡೆದಿದೆ.

ಚಿಕ್ಕಯ್ಯಮಠ ನಿವಾಸಿ ಸತೀಶ್ ಎಂಬವರ ಮನೆಯಿಂದ ಮಂಗಳವಾರ ಕಳವು ನಡೆದಿದೆ.

ಮನೆಯ ಮುಂಬಾಗಿಲ ಚಿಲಕ ಮುರಿದು ಒಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಸುಮಾರು 4.60 ಮೌಲ್ಯದ 11.5 ಪವನ್ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಸತೀಶ್ ಅವರ ಪತ್ನಿ ಸಂಧ್ಯಾ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ .

ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಈ ಕಳವು ನಡೆದಿದೆ. ಸತೀಶ್ ಹಾಗೂ ಅವರ ಪತ್ನಿ ಸಂಧ್ಯಾ ಅವರು ಮನೆಯಿಂದ ಕೆಲಸಕ್ಕೆ ತೆರಳಿದ್ದು ಕೆಲಸ ಮುಗಿಸಿ ಸಂಜೆ 6 ಗಂಟೆ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯಿಂದ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲಿಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...