Friday, April 5, 2024

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಷಷ್ಠಿ ಜಾತ್ರಾ ಮಹೋತ್ಸವ : ಮಲೆಕುಡಿಯ ಜನಾಂಗದವರ ಕೈಚಳಕದಿಂದ ಸಿದ್ಧವಾಗುತ್ತಿದೆ ಬೆತ್ತದ ರಥ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಷಷ್ಠಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಜಾತ್ರಾ ಮಹೋತ್ಸವಕ್ಕಾಗಿ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ತಮ್ಮ ಕೈಚಳಕದಿಂದ ತೇರನ್ನು ಸಿದ್ಧಗೊಳಿಸುವ ಕಾಯಕವನ್ನು ಹಗಲಿರುಳೆನ್ನದೆ ಮಾಡುತ್ತಿದ್ದಾರೆ.

ಕಾರ್ತಿಕ ಮಾಸದ ಶುದ್ಧ ಪೌರ್ಣಮಿ ದಿನ ರಥಗಳಿಗೆ ಗೂಟ ಪೂಜಾ ಮುಹೂರ್ತವನ್ನು ಕ್ಷೇತ್ರ ಪುರೋಹಿತರು ನೆರೆವೇರಿಸುತ್ತಾರೆ. ನಂತರ ಪೂರ್ವಶಿಷ್ಟ ಸಂಪ್ರದಾಯದಂತೆ ರಥಕಟ್ಟಲಿರುವ ಮಲೆಕುಡಿಯ ಜನಾಂಗದ ಗುರಿಕಾರರಿಗೆ ಗಂಧ ಪ್ರಸಾದದ ರೂಪದಲ್ಲಿ ವೀಳ್ಯವನ್ನು ನೀಡುತ್ತಾರೆ. ಬಳಿಕ ದೇವಳದ ಪಾಟಾಳಿಯವರ ನಿರ್ದೇಶನದಂತೆ, ಗುರಿಕಾರರ ನೇತೃತ್ವದಲ್ಲಿ ದೇವಳದಿಂದ ಪಡಿಯಕ್ಕಿ ಪಡೆದು ರಥಕಟ್ಟುವ ಬೆತ್ತದ ಹಗ್ಗ ತರಲು ಕಾಡಿಗೆ ತೆರಳಿ ಬೆತ್ತದ ಹಗ್ಗ ಸಂಗ್ರಹಿಸಿ ರಥ ನಿರ್ಮಾಣ ಕಾರ್ಯ ಆರಂಭಿಸುತ್ತಾರೆ.

ಸುಬ್ರಹ್ಮಣ್ಯದಲ್ಲಿ ಯಾವುದೇ ಹಗ್ಗ ಉಪಯೋಗಿಸದೆ ಕೇವಲ ಬಿದಿರು, ಮರದ ಹಲಗೆ ಹಾಗೂ ಬೆತ್ತವನ್ನು ಉಪಯೋಗಿಸಿ ರಥವನ್ನು ನಿರ್ಮಿಸುತ್ತಿದ್ದಾರೆ. ಭಾರಿ ಗಾತ್ರದ ಬೆತ್ತವನ್ನು 8 ಆಕಾರದಲ್ಲಿ ರಥದ ಮೇಲ್ಭಾಗಕ್ಕೆ ಬಿಗಿದು ಅನಂತರ ರಥದ ಅಟ್ಟೆಯನ್ನು ಬಿದಿರು ಹಾಗೂ ಬೆತ್ತಗಳಿಂದ ಬ್ರಹ್ಮರಥದದ ಮೆಲ್ಭಾಗವನ್ನು ರಚಿಸುತ್ತಾರೆ. ರಥಕಟ್ಟಲು ಒಬ್ಬರು 5ರಂತೆ 250ಕ್ಕೂ ಅಧಿಕ ಬೆತ್ತದ ಹಗ್ಗ ಬಳಸುತ್ತಾರೆ. ಬ್ರಹ್ಮರಥಕ್ಕೆ ಸುಮಾರು 200 ತುಂಡು ಬಿದಿರನ್ನು ಬಳಸಲಾಗುತ್ತದೆ. ಅಲ್ಲದೆ ಮೇಲಿಂದ ಕೆಳಗೆ 100ಕ್ಕೂ ಅಧಿಕ ಅರುಗಳನ್ನು ಅಳವಡಿಸಲಾಗುತ್ತದೆ. ಮಹಾರಥದ ಐದು ಅಂತಸ್ತುಗಳಿಗೆ 8 ಆಕಾರದಲ್ಲಿ ಬೆತ್ತವನ್ನು ಸುತ್ತಲಾಗುತ್ತದೆ. ಸುಮಾರು 20ರಿಂದ 25 ಬೆತ್ತಗಳನ್ನು ಒಂದಾಗಿಸಿ, 8 ಆಕೃತಿಯ ಬೆತ್ತವನ್ನು ರಚಿಸಲಾಗುತ್ತದೆ. ಪತಾಕೆಗಳನ್ನು ಬ್ರಹ್ಮರಥಕ್ಕೆ ಅಳವಡಿಸಲಾಗುತ್ತದೆ. ಬಳಿಕ ಫಲವಸ್ತುಗಳು, ಹೂ, ಬಾಳೆ, ಮಾವಿನ ಎಲೆಗಳಿಂದ ಸಿಂಗಾರ ಮಾಡಲಾಗುವುದು. ನಂತರ ರಥ ಎಳೆಯುವ ಬೆತ್ತವನ್ನು ಅಳವಡಿಸಲಾಗುತ್ತದೆ. ಸುಮಾರು 6 ಅಡಿ ಉದ್ದದ 12 ಬೆತ್ತವನ್ನು ಬ್ರಹ್ಮರಥವನ್ನು ಎಳೆಯಲು ಬಳಸಲಾಗುತ್ತದೆ.

More from the blog

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...