Saturday, April 6, 2024

ಕೆಂಪೇಗೌಡರ ಪ್ರತಿಮೆ ನೆನಪಿನ ಪ್ರತಿಮೆಯಾಗಿ ಉಳಿಯಲಿ- ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ನಾಡಪ್ರಭು ಕೆಂಪೇಗೌಡ ಅವರ 108 ಅಡಿಗಳ ಕಂಚಿನ ಭವ್ಯ ಪ್ರತಿಮೆ ಅನಾವರಣ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹಿಸಲು ಬಂಟ್ವಾಳ ತಾಲೂಕಿಗೆ ಆಗಮಿಸಿರುವ ಕೆಂಪೇಗೌಡ ರಥವನ್ನು ತಾಲೂಕು ಆಡಳಿತದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಸಿರೋಡಿನ ಎನ್. ಜಿ.ರಾವ್ ವೃತ್ತದಲ್ಲಿ ಸ್ವಾಗತಿಸಲಾಯಿತು.

ಬಳಿಕ ಬಿಸಿರೋಡಿನ ತಾಲೂಕು ಕಚೇರಿ ಮುಂಭಾಗದ ವರೆಗೆ ಜಾಥದ ಮೂಲಕ ರಥವನ್ನು ಕರೆತರಲಾಯಿತು. ಅ ನಂತರ ನಡೆದ ಸಭಾ ಕಾರ್ಯಕ್ರಮ ವನ್ನು ಬಂಟ್ವಾಳ ಶಾಸಕ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ವ್ಯಕ್ತಿಯ ವ್ಯಕ್ತಿತ್ವವನ್ನು ಗುರುತಿಸುವ ಮಹತ್ಕಾರ್ಯದ ಜವಾಬ್ದಾರಿಯನ್ನು ಸರಕಾರ ವಹಿಸಿಕೊಂಡು ಯಶಸ್ವಿಯಾಗಿ ನಡೆಸುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕೆಂಪೇಗೌಡರ ಪ್ರತಿಮೆ ನೆನಪಿನ ಪ್ರತಿಮೆಯಾಗಿ ಉಳಿಯಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು‌.

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ತುಕಾರಾಂ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ತಹಶೀಲ್ದಾರ್ ಸ್ಮಿತಾರಾಮು, ಇ.ಒ.ರಾಜಣ್ಣ ಹಾಗೂ ತಾಲೂಕಿನ ಎಲ್ಲಾ ಅಧಿಕಾರಿಗಳು ಹಾಜರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...