Thursday, April 11, 2024

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರಿಶಿಷ್ಟ ಜಾತಿ ‌ಮತ್ತು ಪಂಗಡದ ಕುಂದುಕೊರತೆ ಸಭೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಪರಿಶಿಷ್ಟ ಜಾತಿ ‌ಮತ್ತು ಪಂಗಡ ದ ಕುಂದುಕೊರತೆಗಳ ಸಭೆ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಅಧ್ಯಕ್ಷ ತೆಯಲ್ಲಿ ಮಂಗಳವಾರ ಪುರಸಭಾ ಸಭಾಂಗಣದಲ್ಲಿ ನಡೆಯಿತು.

ಪುರಸಭೆಯಲ್ಲಿ ಖಾಲಿಯಾದ ಕಾರ್ಮಿಕರು ಹಾಗೂ ಇತರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ವೇಳೆ ಪರಿಶಿಷ್ಟ ಜಾತಿ ಹಾಗೂ ಪಂಗಡ ದವರಿಗೆ ಪ್ರಥಮ‌ ಆದ್ಯತೆ ನೀಡಬೇಕು ಎಂದು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಅವರು ಒತ್ತಾಯ ಮಾಡಿದ್ದಾರೆ, ಈ ಬಗ್ಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.

ಎಸ್. ಸಿ.ಎಸ್.ಟಿ. ಸಭೆಯಲ್ಲಿ ನಡೆದ ವಿಚಾರಗಳು ಕೇವಲ ಪುಸ್ತಕದಲ್ಲಿ ದಾಖಲಾಗಿದ್ದು, ಬಿಟ್ಟರೆ ಯಾವುದು ಕಾರ್ಯರೂಪಕ್ಕೆ ಬರುವುದಿಲ್ಲ, ನಾವು ಯಾಕೆ ಚಾ ಕುಡಿಯಲು ಬರುವುದಾ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ತ್ಯಾಜ್ಯ ವಿಲೇವಾರಿ ವಾಹನ ಮೂರು ದಿನಕ್ಕೊಮ್ಮೆ ಕಾಲೋನಿಗಳಿಗೆ ಬರುತ್ತಿದ್ದು, ಕೊಳೆತ ತ್ಯಾಜ್ಯಗಳಿಂದ ಜ್ವರ ಕೆಮ್ಮು ಇತರ ರೋಗಗಳಿಗೆ ತುತ್ತಾಗುವ ಭೀತಿ ಎದುರಾಗಿದೆ ಎಂದು ಹೇಳಿದರು.

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೈದ್ಯರಿಲ್ಲದೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಭೆಯಲ್ಲಿ ಒತ್ತಾಯ ಮಾಡಿದಾಗ ಈ ಬಗ್ಗೆ ಡಿ.ಎಚ್.ಒ.ಅವರ ಗಮನಕ್ಕೆ ತರುವುದಾಗಿ ತಿಳಿಸಿದರು.

ಸಭೆಯಲ್ಲಿ ಮುಖ್ಯಾಧಿಕಾರಿ ಸ್ವಾಮಿ, ಪ್ರಮುಖರಾದ ಗಂಗಾಧರ, ಚಿಕ್ಕ ಅರ್ಬಿಗುಡ್ಡೆ, ಶಿವಮೈರಾನ್ ಪಾದೆ ಸಹಿತ ಅನೇಕರು ಹಾಜರಿದ್ದರು

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...