Saturday, April 6, 2024

ಅಕ್ರಮವಾಗಿ ಚಿನ್ನ ಸಾಗಾಟ : 1.46 ಕೋ.ರೂ. ಮೌಲ್ಯದ ಚಿನ್ನ ಪತ್ತೆ

ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಅ. 22ರಿಂದ ಅ. 31ರ ಅವಧಿಯಲ್ಲಿಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 24 ಕ್ಯಾರೆಟ್‌ ಪರಿಶುದ್ಧತೆಯ 1,46,87,410 ರೂ. ಮೌಲ್ಯದ 2,870 ಗ್ರಾಂ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ

ಚಿನ್ನವನ್ನು ಆರು ಮಂದಿ ಪ್ರಯಾಣಿಕರು ಪೇಸ್ಟ್‌, ಪೌಡರ್‌ ರೂಪಕ್ಕೆ ಪರಿವರ್ತಿಸಿ ಬನಿಯನ್‌, ಜೀನ್ಸ್‌ ಪ್ಯಾಂಟ್‌, ಶೂಗಳು ಮತ್ತು ಗುದದ್ವಾರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದರು ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅ. 8ರಿಂದ 21ರ ನಡುವಿನ ಅವಧಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಒಟ್ಟು 5 ಮಂದಿ ಪ್ರಯಾಣಿಕರು ದುಬಾೖಯಿಂದ ಸಾಗಾಟ ಮಾಡುತ್ತಿದ್ದ 1.59 ಕೋ.ರೂ. ಮೌಲ್ಯದ ಹಾಗೂ ಅ. 6ರಂದು 38.53 ಲ.ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿತ್ತು

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...