Sunday, April 7, 2024

ಶಾಲಾ ಬಾಲಕಿ ನಾಪತ್ತೆ

ಶಾಲಾ ಬಾಲಕಿಯೋರ್ವಳು ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‌‌ ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿಪುಟ್ಟರಾಜ್ ಅವರ ಮಗಳು ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿರುವ ಪೃಥ್ವಿ (12) ಕಾಣೆಯಾದ ಬಾಲಕಿ
ಪುಟ್ಟರಾಜ್ ಅವರ ಮಗಳು ಪೃಥ್ವಿ ಯನ್ನು ವಿದ್ಯಾಭ್ಯಾಸ ದ ಸಲುವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು.
ಕಲ್ಲಡ್ಕ ದ ಅಮ್ಟೂರು ನಿವಾಸಿ ಸಂಬಂಧಿಕ ರಾಜಪ್ಪ ಅವರ ಮನೆಯಲ್ಲಿ ಬಾಲಕಿ ವಾಸವಾಗಿದ್ದು ಅಲ್ಲಿಂದ ಶಾಲೆಗೆ ಹೋಗಿ ಬರುತ್ತಿದ್ದಳು.
ಇಂದು ಕೂಡ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು.
ಆದರೆ ಬಾಲಕಿ ಶಾಲೆಗೆಬರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ.
ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...