Tuesday, April 9, 2024

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೃತ್ಯೋಪಾಸನಾ  ಕಲಾ ಕೇಂದ್ರ ಶಾಖೆಯ ‘ವರ್ಷ ಸಂಭ್ರಮ-10’

ಸುಬ್ರಹ್ಮಣ್ಯ: ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರದ ಸುಬ್ರಹ್ಮಣ್ಯ ಶಾಖೆಯ ವರ್ಷ ಸಂಭ್ರಮ–10 ನೃತ್ಯೋಪಾಸನಾ ಕಾರ್ಯಕ್ರಮ ಭಾನುವಾರ ಕುಕ್ಕೆ ಸುಬ್ರಹ್ಮಣ್ಯ ಶ್ರೀವನದುರ್ಗಾ ದೇವಿ ಸಭಾಂಗಣದಲ್ಲಿ ನಡೆಯಿತು.

ಶ್ರೀಸುಬ್ರಹ್ಮಣ್ಯ ಮಠದ ಸುದರ್ಶನ ಜೋಯಿಸ್‌ ಅವರು ವರ್ಷ ಸಂಭ್ರಮ-10 ಉದ್ಘಾಟಿಸಿ ಶುಭ ಹಾರೈಸಿದರು.

ಇದೇ ಸಂದರ್ಭ 2020 ಮತ್ತು 2021ರಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಜೂನಿಯರ್, ಸೀನಿಯರ್, ವಿದ್ವತ್, ಭರತನಾಟ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ನೃತ್ಯ ಪೋಷಣಾ ಯೋಜನೆಯಡಿ ಕುಲ್ಕುಂದ ಕಾಲೋನಿ ನಿವಾಸಿಗಳಾದ ಸಾನ್ವಿ ಮತ್ತು ಸಾನಿಕ ವಿದ್ಯಾರ್ಥಿಗಳಿಗೆ ನೃತ್ಯಗುರು ಶಾಲಿನಿ ಆತ್ಮಭೂಷಣ್ ನೃತ್ಯ ಪರಿಕರ ನೀಡಿದರು. ಏನೇಕಲ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕಿ ಅಂಬಿಕಾ ನಿರೂಪಿಸಿದರು.

ಬಳಿಕ ಕಲಾಕೇಂದ್ರದ ವಿದ್ಯಾರ್ಥಿಗಳ ನೃತ್ಯೋಪಾಸನಾ ಭರತನಾಟ್ಯ ಕಾರ್ಯಕ್ರಮ ಏರ್ಪಟ್ಟಿತು. ವಿದುಷಿ ಶಾಲಿನಿ ಆತ್ಮಭೂಷಣ್ ನಟುವಾಂಗ, ವಸಂತ ಕುಮಾರ್ ಗೋಸಾಡ ಹಾಡುಗಾರಿಕೆ, ವಿದ್ವಾನ್‌ ಶ್ಯಾಮ್‌ ಭಟ್ ಸುಳ್ಯ ಮೃದಂಗ, ವಿದ್ವಾನ್ ಬಾಲರಾಜ್ ಕಾಸರಗೋಡು ವಯಲಿನ್‌ನಲ್ಲಿ ಸಾಥ್ ನೀಡಿದರು.

More from the blog

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...