Saturday, April 6, 2024

ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ : ಮಾರ್ಗಸೂಚಿಯಂತೆ ಅಗತ್ಯ ಕ್ರಮ-ಜಿಲ್ಲಾಧಿಕಾರಿ

ಮಂಗಳೂರು ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ತಿಳಿಸಿದ್ದಾರೆ.

ಈ ಹಂದಿ ಸಾಕಣೆ ಕೇಂದ್ರದಿAದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಘೋಷಿಸಲಾಗಿದೆ. ರೋಗಪೀಡಿತ ಹಂದಿಗಳನ್ನು ವಧೆ ಮಾಡಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಆ ಸ್ಥಳದಲ್ಲಿ ಕ್ರಿಮಿನಾಶಕ ಸಿಂಪಡಿಸಲು ಹಾಗೂ ಅಲ್ಲಿಗೆ ಸಾರ್ವಜನಿಕರು ಭೇಟಿ ನೀಡದಂತೆ ನಾಮಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸೂಕ್ತ ಕೈಗೊಳ್ಳಲು ಸೂಚನೆ : ಇನ್ನು ಹಂದಿ ಮಾಂಸವನ್ನು ಚೆನ್ನಾಗಿ ಬೇಯಿಸಿ ತಿನ್ನಲು ಸಲಹೆ ನೀಡಲಾಗಿದೆ. ಜಾಗೃತ ವಲಯದಲ್ಲಿರುವ ಹಂದಿ ಸಾಕಾಣಿಕೆದಾರರು ಮತ್ತು ಇತರರು ಸದ್ಯಕ್ಕೆ ರೋಗ ಪೀಡಿತವಲಯಕ್ಕೆ ಭೇಟಿ ನೀಡಬಾರದು ಮತ್ತು ಅಪರಿಚಿತರಿಂದ ಹಂದಿ ಮರಿಗಳನ್ನು ಮತ್ತು ಮಾಂಸವನ್ನು ಖರೀದಿಸಬಾರದು. ತಮ್ಮ ಹಂದಿ ಸಾಕಾಣಿಕಾ ಕೇಂದ್ರಗಳನ್ನು ಬಿಸಿ ನೀರಿನಿಂದ ತೊಳೆದು, ಕ್ರಿಮಿ ನಾಶಕಗಳನ್ನು ಸಿಂಪಡಿಸುತ್ತಿರಬೇಕು. ಹಂದಿಗಳಿಗೆ ನೀಡಲಾಗುವ ಹೋಟೆಲ್ ತ್ಯಾಜ್ಯಗಳನ್ನು ನೀಡದಿರುವುದು ಒಳಿತು, ಅನಿವಾರ್ಯ ಸಂದರ್ಭದಲ್ಲಿ ಚೆನ್ನಾಗಿ ಬೇಯಿಸಿ ನೀಡಬೇಕು. ಆಫ್ರಿಕನ್ ಹಂದಿ ಜ್ವರವು ಹಂದಿಗಳಿAದ ಅಥವಾ ಮಾಂಸ ಸೇವಿಸುವುದರಿಂದ ಮನುಷ್ಯರಿಗೆ ಹರಡುವುದಿಲ್ಲ. ಆದ್ದರಿಂದ ಸಾರ್ವಜನಿಕರು ಮತ್ತು ಹಂದಿ ಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಹಂದಿ ಪಾಲಕರು ಸೂಕ್ತ ಮುಂಜಾಗೃತ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಜಾನುವಾರು ರೋಗಗಳ ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನಿರ್ದೇಶಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...