Friday, April 5, 2024

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

ಸಿದ್ಧಕಟ್ಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಪತ್ರಾಗಾರ ಇಲಾಖೆಯ ಸಹಯೋಗದೊಂದಿಗೆ ನಡೆಸಲಾದ ‘ಚಾರಿತ್ರಿಕ ದಾಖಲೆಗಳಲ್ಲಿ ದಕ್ಷಿಣ ಕನ್ನಡದ ಇತಿಹಾಸ’ ಎಂಬ ವಿಷಯದ ಬಗೆಗಿನ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು ಪ್ರಾಂಶುಪಾಲರಾದ ಡಾ.ಶ್ರೀನಿವಾಸ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಗಿರೀಶ್ ಭಟ್ ಇವರು ಸಮಾರೋಪ ಭಾಷಣ ಮಾಡಿದರು.

ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಶ್ರೀನಿವಾಸ ಇವರು ಈ ರೀತಿಯ ವಿಚಾರಸಂಕಿರಣಗಳು ಬೋಧಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತವೆ. ಬಹು ಸಂಸ್ಕೃತಿಗಳಿರುವ ದಕ್ಷಿಣಕನ್ನಡದಲ್ಲಿ ಇತಿಹಾಸದ ಅಧ್ಯಯನಕ್ಕೆ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಹನುಮಂತಯ್ಯ ಜಿ.ಹೆಚ್ ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥ ಪ್ರೊ.ವಿನಯ್ ವಂದಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...