Sunday, April 7, 2024

ಪ್ರತಿಷ್ಠಿತ ರೋಟರಿ ಕ್ಲಬ್ ಬಿ.ಸಿರೋಡ್ ಸಿಟಿ ಇದರ 2024-25 ನೇ ಸಾಲಿನ ಅಧ್ಯಕ್ಷರಾಗಿ ಟಿ.ಶೇಷಪ್ಪ ಮೂಲ್ಯ ಆಯ್ಕೆ

ಪ್ರತಿಷ್ಠಿತ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಇದರ 2024-25 ನೇ ಸಾಲಿನ ಅಧ್ಯಕ್ಷರಾಗಿ ಟಿ.ಶೇಷಪ್ಪ ಮೂಲ್ಯ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಿನ್ನೆ ನಡೆದ ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ಜಿಎಸ್ಆರ್ ಪದ್ಮನಾಭ ರೈ, ಝೋನಲ್ ಲೆಫ್ಟ್ ನೆಂಟ್ ಸತೀಶ್ ಕುಮಾರ್.ಕೆ, ಅಧ್ಯಕ್ಷ ಪಲ್ಲವಿ ಕಾರಂತ್ ಹಾಗೂ ಬಿ.ಓ.ಡಿ.ಯ ಸರ್ವ ಸದಸ್ಯರ ಸಮ್ಮುಖದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಸ್ಥಾಪಕ ಅಧ್ಯಕ್ಷರಾದ ಸತೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾದ ಕ್ಲಬ್ ವನಸಿರಿ ಜಲಸಿರಿ ಆರೋಗ್ಯ ಸಿರಿ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅತ್ಯಂತ ಯಶಸ್ವಿ ಕ್ಲಬ್ ಎಂದು ಜಿಲ್ಲೆಯಲ್ಲಿ ಹೆಸರು ಪಡೆದಿದೆ.

ರೋಟರಿ ಜಿಲ್ಲೆ 3181ರ ಮೈಸೂರಿನಲ್ಲಿ ನಡೆದ 2021-22ರ ಅವಾರ್ಡ್ ಕಾರ್ಯಕ್ರಮ ಸಮಾರಂಭದಲ್ಲಿ ದಲ್ಲಿ ಕ್ಲಬ್ ಸ್ಥಾಪನೆ ವರ್ಷದಲ್ಲಿಯೇ ಪ್ಲಾಟಿನಮ್ ಪ್ಲಸ್ ಪ್ರಶಸ್ತಿಯನ್ನು ಪಡೆದುಕೊಂದು ಇತಿಹಾಸ ನಿರ್ಮಿಸಿದ್ದು ದಾಖಲೆಯಾಗಿದೆ. ಈಗಿನ ಅಧ್ಯಕ್ಷರಾದಂತಹ ಬಹುಮುಖ ಪ್ರತಿಭೆ ಪಲ್ಲವಿ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಕೂಡ ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಸ್ಟಾನ ಗೋಳಿಸುತ್ತಿದೆ

2023-24 ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಸಮಾಜಮುಖಿ ನಾಯಕರಾದ ಗಣೇಶ್ ಶೆಟ್ಟಿ ಗೊಳ್ತಮಜಲು ಆಯ್ಕೆಗೊಂಡದ್ದು, ಇದೀಗ 2024-25 ರ ಸಾಲಿನ ಅಧ್ಯಕ್ಷರಾಗಿ ಅನುಭವಿ ಪ್ರಶಸ್ತಿ ವಿಜೇತ ಶಿಕ್ಷಕ, ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ದುಡಿದು ಯಶಸ್ವಿ ಹಾಗೂ ಸಮರ್ಥ ನಾಯಕರಾಗಿದ್ದು, ಕೊಡುಗೈ ದಾನಿ, ಸಮಾಜ ಮುಖಿ ಚಿಂತಕ ಹಾಗೂ ಸಮಾಜ ಸೇವಕ ಟಿ ಶೇಷಪ್ಪ ಮೂಲ್ಯ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಇವರ ಅಧ್ಯಕ್ಷತೆಯಲ್ಲಿ ಕ್ಲಬ್ ಅತ್ಯಂತ ಯಶಸ್ವಿ ಕ್ಲಬ್ ಆಗಿ ಮೂಡಿ ಬರಲಿ ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಮನತುಂಬಿ ಹಾರೈಸುತ್ತದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...