Sunday, April 7, 2024

ಕನ್ನಡ ಭಾಷೆ ಉಳಿಯಬೇಕಾದರೆ ಭಾಷೆಯ ಬಗ್ಗೆ ಭಾಷಾಭಿಮಾನ, ಪ್ರೀತಿ ಇರಬೇಕು : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ : ಕನ್ನಡ ಭಾಷೆ ಉಳಿಯಬೇಕಾದರೆ ಭಾಷೆಯ ಬಗ್ಗೆ ಭಾಷಾಭಿಮಾನ ಪ್ರೀತಿ ಇರಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬ ಗಳ ಆಚರಣ ಸಮಿತಿ ವತಿಯಿಂದ ಬಿಸಿರೋಡಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಅತ್ಯಂತ ಸ್ಪಷ್ಟವಾಗಿ ಮಾತನಾಡಬಲ್ಲವರಿದ್ದರೆ ಅದು ದ.ಕ.ಜಿಲ್ಲೆಯ ಜನ ಎಂಬ ಅಭಿಮಾನ ನಮ್ಮದು. ಮಾತೃಭಾಷೆಯ ನಡುವೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ದ.ಕ.ಜಿಲ್ಲೆಯ ನಿಷ್ಠಾವಂತ ಜನರು ನಾವು ಮಾಡಿದ್ದೇವೆ ಎಂಬ ಹೆಮ್ಮೆ ನಮ್ಮದು ಎಂದು ಅವರು ಹೇಳಿದರು.

ಧ್ವಜಾರೋಹಣ ನೆರವೇರಿಸಿದ ತಾಲೂಕು ತಹಶಿಲ್ದಾರ್ ಸ್ಮಿತಾರಾಮು ಅವರು ಮಾತನಾಡಿ ಹಲವು ಪರಿಶ್ರಮಗಳ ಮೂಲಕ ನಮ್ಮ ನಾಡಿನ ರಚನೆಯಾಗಿದ್ದು, ಕಲೆ ಶಿಲ್ಪದ ಬೀಡಾಗಿರುವ ಕರ್ನಾಟಕದ ಹೆಸರಿಗೂ ವಿವಿಧ ಅರ್ಥ ಗಳನ್ನು ಇತಿಹಾಸಕಾರರು ನೀಡಿದ್ದಾರೆ.

ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ರಮೇಶ್ ಮೆಲ್ಕಾರ್ ಅವರು ಮಾತನಾಡಿದರು.

ತಾಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಶಿಕ್ಷಣಾಧಿಕಾರಿ ಜ್ಞಾನೇಶ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಧ್ವಜಾರೋಹಣಕ್ಕೂ ಮೊದಲು ಪೋಲೀಸ್ ಅಧಿಕಾರಿಗಳು, ವಿದ್ಯಾರ್ಥಿ ಗಳು ಪಥಸಂಚಲನದಲ್ಲಿ ಭಾಗವಹಿಸಿದರು.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...