Sunday, April 7, 2024

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಎಸ್.ಕೆ.ಪಿ.ಎ (SKPA)

ಕಳೆದ 32 ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುವುದರ ಜೊತೆಗೆ ಸಾಮಾಜಿಕವಾಗಿಯೂ ಹಲವಾರು ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಸಂಘಟನೆಯು 2022 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತವಾಯಿತು.

ಜಿಲ್ಲಾಡಳಿತದ ಆಶ್ರಯದಲ್ಲಿ ನೆಹರೂ ಮೈದಾನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ಸಂಸದರು, ಶಾಸಕರು ಮತ್ತು ವಿವಿಧ ಗಣ್ಯರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಎಸ್.ಕೆ.ಪಿ.ಎ ಸಂಘಟನೆಯ ಪರವಾಗಿ ಜಿಲ್ಲಾಧ್ಯಕ್ಷರಾದ ಆನಂದ್ ಎನ್. ಬಂಟ್ವಾಳ ಇವರು ಸಂಘಟನೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಸ್.ಕೆ.ಪಿ.ಎ ಸಲಹಾ ಸಮಿತಿ ಸಂಚಾಲಕರಾದ ನವೀನ್ ಕುದ್ರೋಳಿ, ಸಲಹಾ ಸಮಿತಿ ಸದಸ್ಯರಾದ ಕೀರ್ತಿ ಮಂಗಳೂರು, ವಿಠ್ಠಲ ಚೌಟ, ಮಾಜಿ ಜಿಲ್ಲಾಧ್ಯಕ್ಷರುಗಳಾದ ಕರುಣಾಕರ ಕಾನಂಗಿ, ಗೋಪಾಲ್ ಸುಳ್ಯ, ವಾಸುದೇವರಾವ್, ಜಗನ್ನಾಥ್ ಶೆಟ್ಟಿ, ವಿಲ್ಸನ್ ಗೋನ್ಸಾಲ್ವೀಸ್, ಶ್ರೀಧರ್ ಶೆಟ್ಟಿಗಾರ್, ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ಪ್ರಸಾದ್ ಜೈನ್. ಲೋಕೇಶ್ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ, ಜೊತೆ ಕಾರ್ಯದರ್ಶಿಗಳಾದ ಅಜಯ್ ಮಂಗಳೂರು ಮತ್ತು ವಾಮನ್ ಪಡುಕೆರೆ, ಜಿಲ್ಲಾ ಸಂಘಟನೆ ಕಾರ್ಯದರ್ಶಿಗಳಾದ ಜಯಕರ್ ಸಾಲ್ಯಾನ್ . ಹೆರಿಕ್ ಡಿಸೋಜ, ಕ್ರೀಡಾ ಕಾರ್ಯದರ್ಶಿಗಳಾದ ರಾಜೇಶ್ ತೊಕ್ಕೊಟ್ಟು ಮತ್ತು ಶ್ರೀನಿವಾಸ್ ಐತಾಳ್, ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಕಟೀಲು, ಛಾಯಾ ಕಾರ್ಯದರ್ಶಿ ಅಮೃತ್ ಬೀಜಾಡಿ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಉಮೇಶ್ ಮದ್ದಡ್ಕ .ಹಾಗೂ 14 ವಲಯದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಸಂಘಟನೆಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...