Friday, April 12, 2024

17 ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಶೇಷ 67ನೇ ಕನ್ನಡ ರಾಜ್ಯೋತ್ಸವ

ಪುತ್ತೂರು :ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಸುಮಾರು 17 ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ 67ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಮಂಗಳವಾರ ನಗರದ ಬಸ್ ನಿಲ್ದಾಣದ ಬಳಿ ಇರುವ ಗಾಂಧಿಕಟ್ಟೆಯಲ್ಲಿ ಬೆಳಗ್ಗೆ 8 ರಿಂದ ವಿಶೇಷವಾಗಿ ಆಚರಿಸಲಾಯಿತು.

ರಾಷ್ಟ್ರಗೀತೆ, ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಬಳಿಕ ಕನ್ನಡ ಧ್ವಜಾರೋಹಣವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ನೆರವೇರಿಸಿದರು. ಗಾಂಧಿ ಪ್ರತಿಮೆಗೆ ಅತಿಥಿ ಗಣ್ಯರಿಂದ ಮಾಲಾರ್ಪಣೆ ನಡೆಯಿತು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ನಗರದ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ರಿಕ್ಷಾ ತಂಗುದಾಣ ಹಾಗೂ ಇನ್ನಿತರ ನಗರದ ಪ್ರಮುಖ ಭಾಗಗಳಿಗೆ ಕಾರ್ಯಕ್ರಮ ಸಂಘಟಕರು ತೆರಳಿ ಕನ್ನಡ ನಾಡು, ನುಡಿ, ಭಾಷೆ, ಕಲೆ, ಸಾಹಿತ್ಯ ಒಟ್ಟಾರೆಯಾಗಿ ಕನ್ನಡ ನಾಡಿನ ಭವ್ಯ ಪರಂಪರೆಯ ಕುರಿತು ರಸ ಪ್ರಶ್ನೆಗಳನ್ನು ಸಾರ್ವಜನಿಕರಲ್ಲಿ ಕೇಳಿ ಸ್ಥಳದಲ್ಲೇ ಪುಸ್ತಕಗಳನ್ನು ಬಹುಮಾನ ರೂಪದಲ್ಲಿ ನೀಡಲಾಯಿತು. ಬಳಿಕ ಕಾರ್ಯಕ್ರಮ ವೇದಿಕೆಯಲ್ಲಿ ಸಮೃದ್ಧಿ ಸಂಗೀತ ಸಂಸ್ಥೆಯಿಂದ ಕನ್ನಡ ಹಾಡುಗಳ ಆರ್ಕೆಸ್ಟ್ರಾ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ರಿಕ್ಷಾ ಚಾಲಕರಿಗೆ ಗೌರವಾರ್ಪಣೆ ನಡೆಯಿತು.

ಕಾರ್ಯಕ್ರಮ ಪ್ರಮುಖ ಪ್ರಾಯೋಜಕಿ, ಕಾಮಧೇನು ವಿವಿಧೋದ್ದೇಶ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ದೀಪ ಬೆಳಗಿಸಿ ಮಾತನಾಡಿ, ನಮ್ಮ ಕನ್ನಡ ನಾಡು, ನುಡಿ, ನೆಲ, ಸಂಸ್ಕೃತಿಯನ್ನು ಉಳಿಸಿ, ಪೋಷಿಸುವ ಕೆಲಸ ಆದಾಗ ಕನ್ನಡ ರಾಜ್ಯೋತ್ಸವಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ನಿರಂತರ ಕೈಂಕರ್ಯಗಳನ್ನು ನಾವೆಲ್ಲರೂ ಮುಂದಿನ ದಿನಗಳಲ್ಲಿ ಒಟ್ಟಾಗಿ ಮಾಡಿ, ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸೋಣ ಎಂದರು.

ಸಾಹಿತ್ಯ ಪರಿಷತ್‍ನ ಪೀಟರ್ ವಿಲ್ಸರ್ ಪ್ರಭಾಕರ್ ಕನ್ನಡ ಭಾಷೆಯ ಬಗ್ಗೆ ಮಾತನಾಡಿ ಕನ್ನಡವನ್ನು ಉಳಿಸಿ, ಕನ್ನಡ ಭಾಷೆಗೆ ಗೌರವ ನೀಡಿ ಎಂದು ಹೇಳಿದರು.

ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ರೋಟರಿ ಕ್ಲಬ್ ಪುತ್ತೂರು, ಪೂರ್ವ, ಸೆಂಟ್ರಲ್, ಯುವ, ಸ್ವರ್ಣ, ಎಲೈಟ್, ಸಿಟಿ, ಲಯನ್ಸ್ ಕ್ಲಬ್, ಜನ್ಮ ಫೌಂಡೇಶನ್ ಟ್ರಸ್ಟ್, ಚಿಗುರೆಲೆ ಸಾಹಿತ್ಯ ಬಳಗ, ಜೆಸಿಐ, ಇನ್ನರ್‍ವೀಲ್, ಸ್ಪರ್ಶ ಸಹಾಯವಾಣಿ ಕಾರ್ಯಕ್ರಮದ ಸಹಭಾಗಿತ್ವ ಪಡೆದವು.

ಈ ಸಂದರ್ಭದಲ್ಲಿ , ಮಾಜಿ ಪುರಸಭಾ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ಎಂಟು ರೋಟರಿ ಕ್ಲಬ್ ಅಧ್ಯಕ್ಷರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...