Sunday, April 7, 2024

ಸತೀಶ್ ಜಾರಕಿಹೋಳಿ ಹೇಳಿಕೆ ದೇಶದ್ರೋಹದ ಕೆಲಸ : ಸಿ.ಎಂ ಬೊಮ್ಮಾಯಿ

ಹಿಂದೂ ಎನ್ನವುದು ಭಾರತೀಯ ಪದವಲ್ಲ, ಅದು ಪರ್ಷಿಯನ್ ನೆಲಕ್ಕೆ ಸೇರಿದ್ದು, ಅದೊಂದು ಅಶ್ಲೀಲ ಪದವಾಗಿದೆ ಎಂದು ಸತೀಶ್ ಜಾರಕಿಹೋಳಿ ಹೇಳಿದ್ದು, ಈ ಹೇಳಿಕೆ ವಿರುದ್ದ ಮಾತನಾಡಿದ ಸಿಎಂ ಬೊಮ್ಮಾಯಿ, ಸತೀಶ್ ಜಾರಕಿಹೋಳಿ ಹರೇ ಬರೇ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡುತ್ತಿದ್ದಾರೆ ಅಲ್ಪಸಂಖ್ಯಾತರ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಅವರ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ ಇದೊಂದು ದೇಶದ್ರೋಹದ ಕೆಲಸ ಎಂದರು.

ಇನ್ನು ಈ ಬಗ್ಗೆ ರಾಹುಲ್ ಗಾಂಧಿ ಸಿದ್ದರಾಮಯ್ಯ ಮೌನ ಯಾಕೆ? ನಿಮ್ಮ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಸತೀಶ್ ಇನ್ನೂ ಸಮರ್ಥನೆ ಮಾಡ್ತಾರೆ ಹುಳಿ ಹಿಂಡುವ ಕೆಲಸ ಮಾಡ್ತಾರೆ. ದೇಶದಲ್ಲಿ ಕಾಂಗ್ರೆಸ್ ಅಲ್ಪ ಸ್ಪಲ್ಪ ಉಳಿದಿದೆ. ನೆಪಮಾತ್ರದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನ ಮೂಲೆಯ ಸ್ಥಾನ ತೋರಿಸ್ತಾರೆ. ಇದೊಂದು ಪೂರ್ವಗ್ರಹ ಹೇಳಿಕೆ ಮತ್ತು ಯೋಜನಾಬದ್ಧವಾದ ಹೇಳಿಕೆಯಾಗಿದ್ದು, ಹಿಂದೂ ಭಾವನೆ ವಿಚಾರ ಮನಸ್ಸಿಗೆ ಘಾಸಿಯಾಗುವ ಹೇಳಿಕೆ ನೀಡಿರುವುದರಿಂದ ರಾಜ್ಯದ ಜನ ಒಕ್ಕೊರಲಿನಿಂದ ಇದನ್ನು ವಿರೋಧಿಸಬೇಕು ಎಂದಿದ್ದಾರೆ.

ಡಿಕೆ ಸುರೇಶ್ ಸಿಬಿಐಯನ್ನು ಕಿರುಕುಳ ಬ್ಯುರೊ ಆಫ್ ಇಂಡಿಯಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ತಪ್ಪು ಮಾಡದೇ ಇದ್ರೆ ಯಾಕೆ ಭಯ ಪಡುತ್ತಾರೆ. ಯಾವ ತನಿಖೆ ಬಂದ್ರೂ ನಾನು ಸಿದ್ದ ಅಂತಾರಲ್ಲ. ಒಂದು ಕಡೆ ಅದನ್ನು ಹೇಳ್ತಾರೆ, ಇನ್ನೊಂದು ಕಡೆ ಇದನ್ನು ಹೇಳ್ತಾರೆ. ತಪ್ಪು ಮಾಡದೇ ಇದ್ರೆ ಭಯ ಪಡುವ ಅವಶ್ಯಕತೆ ಇಲ್ಲ ಎಂದವರು ಹೇಳಿದರು

ಕಾಂಗ್ರೆಸ್ ಗೆದ್ದು ಖರ್ಗೆ ಅವರಿಗೆ ಗಿಫ್ಟ್ ನೀಡುತ್ತೇವೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಖರ್ಗೆಯವರು ಕೂಡ ಹಿಂದೂಗಳ ಬಗ್ಗೆ ಮಾತನಾಡಿದ್ದು, ಹಿಂದೂ ಪರ್ಷಿಯನ್‌ ಅಂತ ಹೇಳಿ ಅವರೂ ಕೂಡ ಇದರ ಭಾಗ ಆಗಿದ್ದಾರೆ. ಹೀಗಾಗಿ ಯಾರು ಯಾರಿಗೆ ಗಿಫ್ಟ್ ನೀಡುತ್ತಾರೆ ನೋಡೋಣ ಎಂದು ಹೇಳಿದ್ದಾರೆ.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...