Sunday, April 7, 2024

ನ 14ರಂದು ದ.ಕ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭ

ಕರ್ನಾಟಕ ರಾಜ್ಯ ಮಹಾಮಂಡಳ ನಿಯಮಿತ, ಬೆಂಗಳೂರು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು ಹಾಗೂ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಹಾಗೂ ಬಂಟ್ವಾಳ ತಾಲೂಕು ಎಲ್ಲಾ ಪ್ರಾಥಮಿಕ ಸಹಕಾರಿ ಸಂಘಗಳ ಇದರ ಸಂಯುಕ್ತ ಆಶ್ರಯದಲ್ಲಿ 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 2022 ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭವು ನವೆಂಬರ್ 14ರಂದು ಬೆಳಗ್ಗೆ 11ಗಂಟೆಗೆ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವಠಾರದಲ್ಲಿ ನಡೆಯಲಿದೆ.

ಬೆಳಗ್ಗೆ 10ಗಂಟೆಗೆ ಹಿರಿಯ ಸಹಕಾರಿ ಹಾಗೂ ಸಿದ್ದಕಟ್ಟೆ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರ, ಎ. ಗೋಪಿನಾಥ ರೈ ಧ್ವಜಾರೋಹಣ ನಡೆಸಲಿದ್ದಾರೆ.

ಬೆಳಗ್ಗೆ 11ಗಂಟೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಜಿಲ್ಲಾ ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ ನೆರವೇರಿಸಲಿದ್ದಾರೆ.

ದ. ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ನಿರ್ದೇಶಕ ಟಿ, ಜಿ ರಾಜಾರಾಮ್ ಭಟ್ ಸಹಕಾರ ಸಂಸ್ಥೆಗಳ ವ್ಯಾಪಾರ ಸರಳೀಕರಣ ರಫ್ತು ಅಭಿವೃದ್ಧಿಗಾಗಿ ಜೆಮ್- ಪೋರ್ಟಲ್ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...