Saturday, April 6, 2024

69 ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ

ನ.18 ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ಅದ್ದೂರಿಯಾಗಿ ಹಾಗೂ ಮಾದರಿಯಾಗಿ ನಡೆಯಲಿರುವ 69 ನೇ ರಾಜ್ಯಮಟ್ಟದ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ನ.14 ರಂದು ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘ ಸಿದ್ದಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ಯ ಸಿದ್ದತೆಯ ಬಗ್ಗೆ ಪೂರ್ವಭಾವಿ ಸಭೆ ಬಿಸಿರೋಡಿನ ಡಿ.ಸಿ.ಸಿ.ಬ್ಯಾಂಕ್ ಸಭಾಂಗಣದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ರಾಜಾರಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಬಳಿಕ ಮಾತನಾಡಿದ ಅವರು ಸಹಕಾರಿ ಸಪ್ತಾಹದಲ್ಲಿ ಜನರನ್ನು ಸೇರಿಸುವ ಉದ್ದೇಶವಾಗದೆ ಉದ್ಯಮ ಶೀಲತೆಯ ಜೊತೆಗೆ ಸಹಕಾರಿ ರಂಗದಲ್ಲಿ ಮಹತ್ತರವಾದ ಸಾಧನೆಯನ್ನು, ಬದಲಾವಣೆಗಳನ್ನು ಯಾವ ರೀತಿಯಲ್ಲಿ ಮಾಡಬಹುದು, ಹೊಸಹೊಸ ಚಿಂತನೆಗಳ ಮೂಲಕ ಏನು ಮಾಡಬಹುದು ಎಂಬ ಅನೇಕ ಧನಾತ್ಮಕ ವಿಮರ್ಶೆಗಳನ್ನು ಶಕ್ತಿ ತುಂಬುವುದು ಸಪ್ತಾಹ ದ ಮೂಲ ಆದ್ಯತೆ ಯಾಗಿದೆ ಎಂದು ಅವರು ಹೇಳಿದರು.

ಸಿದ್ದಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸಹಕಾರಿ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸುವಂತೆ ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ವಿನಂತಿಸಿದರು.

ಕಾರ್ಯಕ್ರಮ ದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ನ ಅದ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ , ಸ್ಕಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕೆ.ಎಮ್.ಎಫ್ ನ ನಿರ್ದೇಶಕ ಸುಧಾಕರ ರೈ, ಸಹಕಾರಿ ಯೂನಿಯನ್ ‌ನ ನಿರ್ದೇಶಕ ರುಗಳಾದ ಪದ್ಮ ಶೇಖರ್ ಜೈನ್, ಸಾವಿತ್ರಿ ರೈ, ದ‌.ಕ.ಜಿಲ್ಲಾಕೇಂದ್ರ ಬ್ಯಾಂಕಿನ ಉಪಮಹಾ ಪ್ರಬಂಧಕಿ ಶರ್ಮಿಲಾ ಸತೀಶ್ ಭಟ್, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಅರುಣ್ ರೋಶನ್ ಡಿಸೋಜ, ಸಹಕಾರ ಸಹಾಯಕ ನಿಭಂದಕ ಸುದೀರ್ ಕುಮಾರ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಗೋಪಾಲ, ವಲಯ ಮೇಲ್ವಿಚಾರಕರಾದ ಕೇಶವ ಕಿಣಿ ಎಚ್, ಯೋಗೀಶ್ ಎಚ್ , ಬಿಸಿರೋಡಿನ ಶಾಖಾ ವ್ಯವಸ್ಥಾಪಕ ಗಣೇಶ್ ಕಾರಂತ, ತಾಲೂಕಿನ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...