Saturday, April 13, 2024

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಆವರಣ, ಸುತ್ತಮುತ್ತಲಿನ ಪ್ರದೇಶ ಡ್ರಗ್ಸ್‌, ಮದ್ಯ ಮುಕ್ತ : ಕೇರಳ ಸರ್ಕಾರದಿಂದ ಮಹತ್ವದ ಘೋಷಣೆ

ಪಟ್ಟಣಂತಿಟ್ಟ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶ ಡ್ರಗ್ಸ್‌ ಮತ್ತು ಮದ್ಯ ಮುಕ್ತ ಪ್ರದೇಶ ಎಂದು ಕೇರಳ ಸರ್ಕಾರ ಘೋಷಿಸಿದೆ.

ಶಬರಿಮಲೆ ಯಾತ್ರೆಗೆ ಕೆಲವೇ ದಿನಗಳು ಬಾಕಿ ಇರುವ ವೇಳೆಗೆ ಸರ್ಕಾರದಿಂದ ಈ ಘೋಷಣೆ ಹೊರ ಬಿದ್ದಿದ್ದು, ದೇವಳದ ಆವರಣ ಮತ್ತು ಸುತ್ತಮುತ್ತಲಿನ ಆವರಣದಲ್ಲಿ ಡ್ರಗ್ಸ್‌ ಮತ್ತು ಮದ್ಯ ಸೇವನೆ ನಿಷಿದ್ದ. ದೇವಳ ಆವರಣ, ಪಂಪ, ತ್ರಿವೇಣಿ, ಮರಕೂಟಂ, ಶಬರಿ ಪೀಠ ಮತ್ತು ಸುತ್ತಮುತ್ತಲಿನ ಕೆಲ ಗ್ರಾಮಗಳಿಗೂ ಇದು ಅನ್ವಯವಾಗುತ್ತದೆ ಎಂದು ತಿಳಿಸಿದೆ.

ನ.17ರಿಂದ ಪ್ರಾರಂಭವಾಗಿ ಜ.15ರವರೆಗೆ ಶಬರಿಮಲೆ ಯಾತ್ರೆ, ವಾರ್ಷಿಕ ದರ್ಶನ ನಡೆಯುತ್ತದೆ. ಇದೇ ವೇಳೆ ಸರ್ಕಾರ ಈ ಮಹತ್ವದ ಘೋಷಣೆ ಮಾಡಿದೆ. ಅಲ್ಲದೆ, ನವೆಂಬರ್ 14ರಿಂದ ಜನವರಿ 22ರವರೆಗೆ ಮದ್ಯ, ಡ್ರಗ್ಸ್‌, ತಂಬಾಕು ಉತ್ಪನ್ನಗಳ ಬಳಕೆ ಮತ್ತು ಮಾರಾಟವನ್ನು ಕೂಡಾ ಈ ಪ್ರದೇಶದಲ್ಲಿ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇನ್ನು ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಈ ಬಗ್ಗೆ ಗಮನ ನೀಡಬೇಕು. ಸರ್ಕಾರದ ಆದೇಶ ಮೀರಿ ನಡೆದುಕೊಳ್ಳುವಂತಿಲ್ಲ. ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಆದೇಶದ ಕಟ್ಟುನಿಟ್ಟಿನ ಪಾಲನೆಗೆ ನಿಗಾ ವಹಿಸಲಿದ್ದಾರೆ ಎಂದು ತಿಳಿಸಿದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...