Saturday, April 13, 2024

ಇನ್ಮುಂದೆ ಶಾಲೆಗಳಲ್ಲಿ ಧ್ಯಾನ ಕಡ್ಡಾಯ : ಶಿಕ್ಷಣ ಇಲಾಖೆಯ ಕ್ರಮವನ್ನು ಸ್ವಾಗತಿಸಿದ ಸರಕಾರಿ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್

ಬಂಟ್ವಾಳ: ಇನ್ಮುಂದೆ ಶಾಲೆಗಳಲ್ಲಿ ಯೋಗ ಹಾಗೂ ಧ್ಯಾನವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆಯ ಕ್ರಮವನ್ನು ಸರಕಾರಿ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಹಾಗೂ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ಸ್ವಾಗತಿಸಿದೆ.

ಜಂಟಿ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಅವರು ಪ್ರತಿಕ್ರಿಯಿಸಿ ಇಡೀ ವಿಶ್ವಕ್ಕೆ ಯೋಗದ ಮಹತ್ವವನ್ನು‌ ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿಕೊಟ್ಟಿದ್ದು, ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಯೋಗ ಹಾಗೂ ಧ್ಯಾನವನ್ನು ಖಡ್ಡಾಯಗೊಳಿಸಿರುವುದರಿಂದ ಪ್ರಧಾನಿಯವರ ಆಶಯ ಕರ್ನಾಟಕದ ಎಲ್ಲಾ ಶಾಲೆಗಳಲ್ಲೂ ಅನುಷ್ಠಾನಗೊಳ್ಳಲಿದೆ. ಯೋಗ ಹಾಗೂ ಧ್ಯಾನದಿಂದ ವಿದ್ಯಾರ್ಥಿಗಳಲ್ಲಿ ನವೋಲ್ಲಾಸ ಮೂಡಿ ಬೌದ್ದಿಕ ಹಾಗೂ ಮಾನೋ ಬೆಳವಣಿಗೆಗೆಯಾಗಿ ಕಲಿಕೆಗೆ ಪೂರಕವಾಗಲಿದೆ. ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆಯೇ ವಿದ್ಯಾಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು ಯೋಗ ಹಾಗೂ ಧ್ಯಾನ ಮಾಡಿ ಶಾಲಾ ದಿನಚರಿಯನ್ನು ಆರಂಭಿಸುತ್ತಿದ್ದು ಆರೋಗ್ಯ ಹಾಗೂ ಬೌದ್ದಿಕ ವಿಕಾಸಕ್ಕೆ ಇದು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...