Sunday, April 14, 2024

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉಪಸ್ಥಿತಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತ ವಸಂತ ಬಿಜೆಪಿಗೆ ಸೇರ್ಪಡೆ

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ದೇವಶ್ಯಪಡೂರು ಗ್ರಾಮದ ಕ್ರಿಯಾಶೀಲ , ಸಕ್ರೀಯ ಕಾಂಗ್ರೇಸ್ ಕಾರ್ಯಕರ್ತ ವಸಂತ ಅವರನ್ನು ಬಿಜೆಪಿ ಶಾಲು ಹಾಕಿ , ಬಿಜೆಪಿ ಧ್ವಜವನ್ನು ನೀಡಿ ಸೇರ್ಪಡೆ ಮಾಡಲಾಯಿತು.

ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್,ಅವರು ದೇಶದ, ಹಿಂದುತ್ವದ ಸಂಸ್ಕೃತಿಯ ಮೇಲೆ ಪ್ರೀತಿಯಿರುವ,ಭವಿಷ್ಯದ ಚಿಂತನೆಯಿರುವ ಪ್ರತಿಯೊಬ್ಬನಿಗೂ ಬಿಜೆಪಿ ಪಕ್ಷ ಸದಾ ತೆರೆದಿರುತ್ತದೆ. ಯಾವುದೇ ರಾಜಕೀಯ ಪಕ್ಷಕ್ಕೆ  ಧ್ಯೇಯ, ಬದ್ದತೆ, ಸಿದ್ದಾಂತ ಬೇಕು, ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕು, ಅ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ಹೇಳಿದರು. ಅಭಿವೃದ್ಧಿ ವಿಚಾರದಲ್ಲಿ ಮಾತನಾಡಲು ಅಧಿಕಾರ ಇಲ್ಲದವರು, ಪ್ರಸ್ತುತ ದಿನಗಳಲ್ಲಿ ಟೀಕೆ ಟಿಪ್ಪಣಿ ಮಾಡುತ್ತಿರುವ ಕಾಂಗ್ರೇಸ್ ಪಕ್ಷ ಡೆಪೋಸಿಟ್ ಇಲ್ಲದ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯ ಬೆಳವಣಿಗೆಯನ್ನು ನೋಡಿ ಬೇರೆ ಬೇರೆ ಪಕ್ಷದ ನಾಯಕರು , ಕಾರ್ಯಕರ್ತರು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಒಳಚರಂಡಿ ನಿಗಮ‌ಮಂಡಳಿ ಸದಸ್ಯೆ ಸುಲೋಚನ ಜಿ.ಕೆ.ಭಟ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಪುಷ್ಪರಾಜ ಚೌಟ, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಸದಾನಂದ ನಾವೂರ, ಕಮಲಾಕ್ಷಿ ಕೆ.ಪೂಜಾರಿ, ಗೋಪಾಲ ಸುವರ್ಣ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಮೋನಪ್ಪ ದೇವಶ್ಯ, ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಪ್ರಧಾನಿ ಮೋದಿ ರೋಡ್ ಶೋಗೆ ಸಿದ್ಧತೆ : ರಸ್ತೆಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಂಗಳೂರು: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋ ಇರುವ ಹಿನ್ನೆಲೆಯಲ್ಲಿ ಭಾರೀ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶನಿವಾರ ಸಂಜೆಯಿಂದಲೇ ಪೊಲೀಸರು ಕಾರ್ಯ ನಿರತರಾಗಿದ್ದು, ಹೊಸದಿಲ್ಲಿಯಿಂದ ಆಗಮಿಸಿರುವ ಎಸ್‌ಪಿಜಿ ಅಧಿಕಾರಿಗಳು ರೋಡ್‌ ಶೋ...

ಮೊಸಳೆಯ ಹೊಟ್ಟೆಯಲ್ಲಿ 1 ಕೆ.ಜಿ ಪ್ಲಾಸ್ಟಿಕ್ ಪತ್ತೆ….! ತ್ಯಾಜ್ಯ ಜೀರ್ಣವಾಗದೆ ಮೊಸಳೆ ಸಾವು

ಸುಬ್ರಹ್ಮಣ್ಯ: ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್‌ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು...